ಬಿ. ಬಿ. ಹೆಗ್ಡೆ ಕಾಲೇಜು: ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಅರಿವು ಕಾರ್ಯಕ್ರಮ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ಸಬಲೀಕರಣ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಅರಿವು ಕಾರ್ಯಕ್ರಮ ನಡೆಯಿತು.

Call us

Click Here

ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಮಾತನಾಡಿ, ಆರೋಗ್ಯ ಮತ್ತು ನೈರ್ಮಲ್ಯ ಉತ್ತಮ ಆರೋಗ್ಯದ ತಳಹದಿ, ಆಧುನಿಕತೆಯ ಯಾಂತ್ರಿಕ ಬದುಕಿಗೆ ಒಗ್ಗಿಕೊಂಡಿರುವAತ ವಿದ್ಯಾರ್ಥಿಗಳು ಆರೋಗ್ಯ ಮತ್ತು ಸ್ವಚ್ಛತೆಯ ಬಗ್ಗೆ ಪ್ರಾಮುಖ್ಯತೆಯನ್ನು ನೀಡುವುದು ಅತ್ಯಂತ ಮುಖ್ಯವಾಗಿದ್ದು, ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾದರೆ ಹಿತಮಿತವಾದ ಉತ್ತಮ ಆಹಾರ, ಶುದ್ಧ ನೀರು, ನಿಯಮಿತವಾದ ವ್ಯಾಯಾಮ ಅವಶ್ಯಕ ಎಂದರು.

ಉಪ-ಪ್ರಾಂಶುಪಾಲರು ಮತ್ತು ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ| ಚೇತನ್ ಶೆಟ್ಟಿ ಕೋವಾಡಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ, ಮಹಿಳಾ ಸಬಲೀಕರಣ ಘಟಕದ ಸಂಯೋಜಕರಾದ ರಶ್ಮಿ ಗಾವಡಿ ಉಪಸ್ಥಿತರಿದ್ದರು. ಮಹಿಳಾ ಸಬಲೀಕರಣ ಘಟಕದ ಸಂಯೋಜಕರಾದ ವೀಣಾ ವಿ. ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply