ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಡಾ|| ಸರ್ವೇಪಳ್ಳಿ ರಾಧಾಕೃಷ್ಣನ್‌ರವರ ಜನ್ಮದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ , ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ, ಪೂರ್ವ ಪಾರ್ಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ ಹಾಗೂ ಶಾಲಾ ವಿದ್ಯಾರ್ಥಿ ಸಂಸತ್ತಿನ ಮಕ್ಕಳು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು.
ವಿದ್ಯಾರ್ಥಿ ಮನ್ವಿತಾ ಎಸ್. ಅವರು ಶಿಕ್ಷಕರ ದಿನಾಚರಣೆ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಲೋನಾ ಡಿಸೋಜಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.