ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಿಕ್ಷಕರ ದಿನಾಚರಣೆಯ ಸುಸಂದರ್ಭದಲ್ಲಿ ಶಿಕ್ಷಣ ಇಲಾಖೆಯಿಂದ ರಾಜ್ಯ ಮಟ್ಟದ ಉತ್ತಮ ಪ್ರಾಂಶುಪಾಲರ ಪ್ರಶಸ್ತಿಗೆ ಆಯ್ಕೆಯಾದ ಕುಂದಾಪುರದ ಜ್ಯೂನಿಯರ್ ಕಾಲೇಜು ಪ್ರಾಂಶುಪಾಲರಿಗೆ ಪ್ರಶಸ್ತಿ ನೀಡುವ ವಿಷಯದಲ್ಲಿ ತಾತ್ಕಾಲಿಕ ತಡೆ ನೀಡಿರುವ ರಾಜ್ಯ ಸರ್ಕಾರದ ನಡೆಯನ್ನು ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಖಂಡಿಸಿದ್ದಾರೆ.
ಇದನ್ನೂ ಓದಿ:
► ಕುಂದಾಪುರ: ರಾಮಕೃಷ್ಣ ಬಿ. ಜಿ. ಅವರಿಗೆ ಉತ್ತಮ ಪ್ರಾಚಾರ್ಯ ರಾಜ್ಯ ಪ್ರಶಸ್ತಿ – https://kundapraa.com/?p=76098 .
ಪಾಲರಾದ ಬಿ. ಜಿ. ರಾಮಕೃಷ್ಣ ಅವರ ಎಲ್ಲಾ ಅರ್ಹತೆಯನ್ನು ಗಮನಿಸಿ ಶಿಕ್ಷಣ ಇಲಾಖೆ ಪ್ರಶಸ್ತಿ ಆಯ್ಕೆ ಮಾಡಿದೆ. ಶಿಕ್ಷಣ ವಿಷಯದಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು. ಇದು ಶಿಕ್ಷಣ ಇಲಾಖೆ ಮತ್ತು ದೇಶದಾದ್ಯಂತ ಇರುವ ಶಿಕ್ಷಕರಿಗೆ ಮಾಡಿದ ಅವಮಾನ. ರಾಜ್ಯ ಸರ್ಕಾರ ಈ ಕೂಡಲೇ ತಾತ್ಕಾಲಿಕ ತಡೆಯನ್ನು ತೆಗೆದು ಹಾಕಿ ಈ ಹಿಂದೆ ಆಯ್ಕೆಯಾದ ಗೌರವಾನ್ವಿತ ಶಿಕ್ಷಕರಿಗೆ ಪ್ರಶಸ್ತಿ ನೀಡಬೇಕು ಅವರು ಆಗ್ರಹಿಸಿದ್ದಾರೆ.










