ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ 2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಇತ್ತಿಚಿಗೆ ನಡೆಯಿತು.
ಕಾರ್ಯಕ್ರಮವನ್ನು ತೆಂಕನಿಡಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎನ್. ವಿಶ್ವನಾಥ ಕರಬ ಅವರು ಉದ್ಘಾಟಿಸಿ ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆಯ ಧ್ಯೇಯ್ಯೋದ್ದೇಶಗಳು, ಅದರಿಂದಾಗುವ ಪ್ರಯೋಜನಗಳ ಬಗ್ಗೆ ವಿವರಿಸಿ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಸತ್ಯನಾರಾಯಣ ಹತ್ವಾರ್ ಇವರು ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವ ಮತ್ತು ಅಗತ್ಯತೆ ಬಗ್ಗೆ ತಿಳಿಸಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದ ಅರುಣ್ ಏ. ಎಸ್, ರಾಮಚಂದ್ರ ಆಚಾರ್ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.
ಸ್ವಯಂಸೇವಕರಾದ ಸಮೀಕ್ಷಾ ಶೆಟ್ಟಿ ಸ್ವಾಗತಿಸಿದರು, ದೀಕ್ಷಾ ಅತಿಥಿಗಳನ್ನು ಪರಿಚಯಿಸಿದರು. ಅಮಿತ್ ರಾಜ್ ವಂದಿಸಿದರು ಹಾಗೂ ವಿಗ್ನೇಶ್ ಕಾರ್ಯಕ್ರಮ ನಿರ್ವಹಿಸಿದರು.















