ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಶುಕ್ರವಾರದಂದು ಶಿಕ್ಷಕರ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು.     

Call us

Click Here

ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ ಹಟ್ಟಿಯಂಗಡಿಯ ಕಾರ್ಯದರ್ಶಿಗಳೂ, ಶಾಲಾ ಪ್ರಾಂಶುಪಾಲರೂ ಆದ ಶರಣ ಕುಮಾರ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, “ಶಾಲೆಯಲ್ಲಿ ಕರ್ತವ್ಯ ನಿರತರಾದ ಶಿಕ್ಷಕರನ್ನು ಗೌರವಿಸುವುದರಿಂದ ಮಕ್ಕಳಿಗೆ ಆನಂದ ದೊರೆಯುವುದರೊಂದಿಗೆ, ಶಿಕ್ಷಕರಿಗೆ ತಮ್ಮ ಸ್ಥಾನ ಮತ್ತು ಜವಾಬ್ದಾರಿಯ ಬಗ್ಗೆ ಅರಿವು ಮೂಡುತ್ತದೆ. ಸತ್ಸಮಾಜದ ಸಂರಚನೆಯ ಸದುದ್ದೇಶದಿಂದ ಆರಂಭಗೊಂಡ ಈ ಸಂಸ್ಥೆ ವಿದ್ಯಾರ್ಥಿಗಳನ್ನು ಸುಸಂಸ್ಕೃತರನ್ನಾಗಿಸುತ್ತಾ ಸಾಗಿ ಬಂದಿದ್ದು, ಇದನ್ನು ಮುಂದುವರಿಸಿಕೊಂಡು ಹೋಗಲು ಶಿಕ್ಷಕರು ಒಮ್ಮನಸ್ಸಿನಿಂದ ಶ್ರಮಿಸಬೇಕಾಗಿದೆ”ಎಂದು ತಿಳಿಸಿದರು.

ಶಾಲೆಯಲ್ಲಿ ಅಧ್ಯಾಪನ ವೃತ್ತಿಯಲ್ಲಿರುವ ಎಲ್ಲಾ ಶಿಕ್ಷಕರರಿಗೆ ಈ ಸಂದರ್ಭದಲ್ಲಿ ಕಿರು ಕಾಣಿಕೆಯನ್ನು ನೀಡಿ ಗೌರವಿಸಲಾಯಿತು. 2023-24ನೇ ಸಾಲಿನಲ್ಲಿ ರೂಬಿಕ್ ಕ್ಯೂಬ್‌ನಲ್ಲಿ ಗಿನ್ನೆಸ್ ದಾಖಲೆಯ ಮೂಲಕ ಇತಿಹಾಸ ಸೃಷ್ಟಿಸಿದ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ, ಶಾಲಾ ಆಡಳಿತಾಧಿಕಾರಿ ವೀಣಾ ರಶ್ಮೀ ಎಂ. ಹಾಗೂ ಎಲ್ಲಾ ಶಿಕ್ಷಕರುಗಳಿಗೆ ಗಿನ್ನೆಸ್ ದಾಖಲೆಯ ಪದಕ ಮತ್ತು ಪ್ರಮಾಣಪತ್ರಗಳನ್ನುನೀಡಿ ಸನ್ಮಾನಿಸಲಾಯಿತು.

ಬಸ್ರೂರಿನ ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ರಾಧಾಕೃಷ್ಣ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು, ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜೀವನಚರಿತ್ರೆ, ಜ್ಯೋತಿ ಬಾ ಪುಲೆ, ಆನಂದ ಕುಮಾರರ ಜೀವನದ ಘಟನೆಗಳ ಬಗ್ಗೆ ತಿಳಿಸುತ್ತಾ “ರಾಧಾಕೃಷ್ಣನ್ ಜನಮೆಚ್ಚಿದ ಶಿಕ್ಷಕರಾಗಿದ್ದು, ಶಿಕ್ಷಕ ವೃತ್ತಿಯನ್ನು ಆನಂದಿಸಿದ್ದರು. ತಮ್ಮ ವೃತ್ತಿಜೀವನದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿ ಅವರ ಬಾಳಿಗೆ ಬೆಳಕಾಗಿದ್ದರು. ರಾಧಾಕೃಷ್ಣನ್‌ರಂತಹ ಶಿಕ್ಷಕರು ಸಮಾಜಕ್ಕೆ ಎಂದಿಗೂ ಅವಶ್ಯಕ. ಸದೃಢ ಸಮಾಜ ನಿರ್ಮಾಣವಾಬೇಕಾದರೆ ಅದು ಉತ್ತಮ ಶಿಕ್ಷಕರಿಂದ ಮಾತ್ರ ಸಾಧ್ಯ”ಎಂದು ಅಭಿಪ್ರಾಯಪಟ್ಟರು.

ಭಂಡಾರ್‌ಕಾರ್ಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಮತ್ತು ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಟ್ರಸ್ಟಿಗಳೂ ಆದ ಎನ್. ಪಿ. ನಾರಾಯಣ ಶೆಟ್ಟಿ ಮಾತನಾಡುತ್ತಾ, “ನಾವು ಶಿಕ್ಷಕರನ್ನು ಗೌರವಿಸಿದೆವು ಎಂಬ ಆನಂದ ಮಕ್ಕಳಿಗೆ ನೀಡಬೇಕಾದರೆ ಇಂತಹ ಕಾರ್ಯಕ್ರಮಗಳು ಅಗತ್ಯ. ಇಂದು ಶಿಕ್ಷಕರಿಗೆ ತಮ್ಮ ಗುರುತರವಾದ ಜವಾಬ್ದಾರಿಯನ್ನು ನೆನಪಿಸುವ ದಿನ. ತಮ್ಮ ವಿದ್ಯಾರ್ಥಿಗಳಿಗೆ ನೀಡಬೇಕಾದ ಶಿಕ್ಷಣದ ಗುಣಮಟ್ಟವನ್ನು ಪ್ರತಿನಿತ್ಯ ಹೆಚ್ಚಿಸಿಕೊಂಡು, ವೃತ್ತಿಯನ್ನು ತನ್ಮಯತೆಯಿಂದ ನಡೆಸಬೇಕು.” ಎಂದು ನಲ್ನುಡಿಗಳನ್ನಾಡಿದರು.

Click here

Click here

Click here

Click Here

Call us

Call us

ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಉಪಾಧ್ಯಕ್ಷರು ಹಾಗೂ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಧರ್ಮದರ್ಶಿಗಳಾದ ವೇದಮೂರ್ತಿ ಬಾಲಚಂದ್ರ ಭಟ್ಟರು ಅಧ್ಯಕ್ಷೀಯ ನುಡಿಗಳಲ್ಲಿ “ ಗುರುವು ನಮ್ಮನ್ನು ಗುರುತಿಸಿ ಬೆಳೆಸುತ್ತಾನೆ. ಅವನ ಆದೇಶ ಸರ್ವದಾ ಪಾಲನೀಯವೇ ಆಗಿರುತ್ತದೆ.” ಎಂದು ಕಥೆಯ ಮೂಲಕ ತಿಳಿಸಿದರು.

ಶಾಲಾ ಸಂಸ್ಥಾಪಕರರಾದ ವೇದಮೂರ್ತಿ ಹೆಚ್. ರಾಮಚಂದ್ರ ಭಟ್ಟರ ಧರ್ಮಪತ್ನಿ ರಮಾದೇವಿ, ಶಾಲಾ ಆಡಳಿತಾಧಿಕಾರಿ ವೀಣಾ ರಶ್ಮಿ ಎಮ್, ಶಾಲಾ ಉಪ ಪ್ರಾಂಶುಪಾಲರಾದ ಶ್ರೀ ರಾಮ ದೇವಾಡಿಗ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಸುಜಾತಾ ಸದಾರಾಮ್ ವೇದಿಕೆಯಲ್ಲಿದ್ದರು. ಶಿಕ್ಷಕ- ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ತನ್ವಿ ಶೆಟ್ಟಿ ಕಾರ್ಯಕ್ರಮವನ್ನು ನಿರ್ವಹಿಸಿದರು. ವಿದ್ಯಾರ್ಥಿನೀ ಗ್ರೀಷ್ಮಾ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಕುಮಾರ ನಾಗಾರ್ಜುನ ಹಾಗೂ ಶಿಜಾ  ಅಧ್ಯಾಪಕರ ಪಟ್ಟಿಯನ್ನು, ಸುರ್ಜಿತ್ ಗಿನ್ನೆಸ್ ಪದಕ ವಿಜೇತರ ಪಟ್ಟಿಯನ್ನು ವಾಚಿಸಿದರು. ಕಾಲೇಶ್ವರ  ವಂದನಾರ್ಪಣೆಗೈದರು.

Leave a Reply