ಸುರಭಿ ರಿ. ಬೈಂದೂರು – ರಜತಯಾನ ಚಾಲನೆ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಸಾಂಸ್ಕೃತಿಕ ರಂಗದಲ್ಲಿ ಅವಿರತವಾಗಿ ತೊಡಗಿಸಿಕೊಂಡು ಜನಮಾನಸದಲ್ಲಿ ಸ್ಥಾನ ಪಡೆದಿರುವ ಸುರಭಿ ಸಂಸ್ಥೆಯು ಹಲವು ಸಾಧನೆಯ ಮೈಲುಗಲ್ಲುಗಳನ್ನು ದಾಟಿ 25ನೇ ವರ್ಷದ ಸಂಭ್ರಮದಲ್ಲಿರುವುದು ಶ್ಲಾಘನಾರ್ಹ ಸಂಗತಿಯಾಗಿದೆ ಎಂದು ಬೈಂದೂರು ರೋಟರಿ ಕ್ಲಬ್ ಪೂರ್ವಾಧ್ಯಕ್ಷ, ಉದ್ಯಮಿ ಪ್ರಸಾದ್ ಪ್ರಭು ಶಿರೂರು ಹೇಳಿದರು.

Call us

Click Here

ಅವರು ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಶುಕ್ರವಾರ ಸುರಭಿ ರಿ. ಬೈಂದೂರು ಸಂಸ್ಥೆಯ ಬೆಳ್ಳಿಹಬ್ಬದ ಅಂಗವಾಗಿ ಸೆ.14ರಂದು ಆಯೋಜಿಸಲಾಗಿರುವ ರಜತಯಾನ -2024 ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳನ್ನು ಕೈಗೊಳ್ಳುವುದು ಸವಾಲಿನ ಕೆಲಸವಾಗಿದ್ದು ಸತತ ಆಸಕ್ತಿ ಹಾಗೂ ಬದ್ಧತೆಯಿಂದ ಮಾತ್ರ ಇದು ಸಾಧ್ಯವಾಗುತ್ತದೆ ಎಂದರು.

ಸುರಭಿ ಸಂಸ್ಥೆಯ ಅಧ್ಯಕ್ಷ ಆನಂದ ಮದ್ದೋಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಲಕ್ಷ್ಮಣ ಕೊರಗ, ನಿಕಟಪೂರ್ವ ಅಧ್ಯಕ್ಷ ನಾಗರಾಜ ಪಿ. ಯಡ್ತರೆ ಉಪಸ್ಥಿತರಿದ್ದರು.

ನಿರ್ದೇಶಕ ಸುಧಾಕರ ಪಿ. ಬೈಂದೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಉಪ್ಪುಂದ ಕಾರ್ಯಕ್ರಮ ನಿರೂಪಿಸಿದರು.

Leave a Reply