ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆಯಂದು ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲು ಅರ್ಜಿ ಆಹ್ವಾನಿಸಲಾಗಿದೆ.
ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25,000 ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1,00,000 ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 27 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574978 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.