ಗಂಗೊಳ್ಳಿ: ಕಿಶೋರಿ ಮಾಹಿತಿ ಕಾರ್ಯಾಗಾರ ಸಭೆ ಸಂಪನ್ನ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಇವರ ಆಶ್ರಯದಲ್ಲಿ ಕಿಶೋರಿ ಮಾಹಿತಿ ಕಾರ್ಯಾಗಾರ ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

Call us

Click Here

ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರವಿಶಂಕರ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ತಾಂಡೇಲ ಮತ್ತು ಪತ್ರಕರ್ತ ಬಿ. ರಾಘವೇಂದ್ರ ಪೈ ಶುಭ ಹಾರೈಸಿದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ ಮಾಹಿತಿ ನೀಡಿ ವಿದ್ಯಾರ್ಥಿನಿಯರೊಂದಿಗೆ ಚರ್ಚೆ ನಡೆಸಿದರು. ರೋಟರಿ ಕಾರ್ಯದರ್ಶಿ ಮಾಲಾಶ್ರೀ ಖಾರ್ವಿ, ಎಸ್‌ಡಿಎಂಸಿ ಉಪಾಧ್ಯಕ್ಷೆ ರೇಣುಕಾ ಮೊಗವೀರ, ಸದಸ್ಯ ಅಶೋಕ ಪೂಜಾರಿ ಉಪಸ್ಥಿತರಿದ್ದರು.

ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಯಶೋಧಾ ಸ್ವಾಗತಿಸಿದರು. ಸಹಕಶಿಕ್ಷಕಿಯರಾದ ಅನುಷಾ ಸಿ. ಬಂಗೇರ ಕಾರ್ಯಕ್ರಮ ನಿರ್ವಹಿಸಿದರು. ಸಹಶಿಕ್ಷಕಿ ನಾಗರತ್ನ ವಂದಿಸಿದರು.

Leave a Reply