ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ದ್ವಿತೀಯ ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್ ಇಂಜಿನಿಯರಿಂಗ್ ಸೇರಿದಂತೆ ಮುಂತಾದ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಬಹುಮಾನ ಹಣವನ್ನು ಮಂಜೂರು ಮಾಡುವ ಸಲುವಾಗಿ ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ twd.karnataka.gov.in (Post matric(PUC/ Degree/PG) prize money) ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Call us

Click Here

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಒಂದು ವಾರದ ಒಳಗಾಗಿ ಅರ್ಜಿಯನ್ನು ಹಾಗೂ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ, ಐ.ಟಿ.ಡಿ.ಪಿ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿಗೆ ನೀಡಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574814 ಅನ್ನು ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Leave a Reply