ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಹಾಗೂ ಶುಭದಾ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ ಇವರ ಜಂಟಿ ಆಶ್ರಯದಲ್ಲಿ ಬೈಂದೂರು ತಾಲೂಕು ಮಟ್ಟದ ಪ್ರೌಢ ಶಾಲಾ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟವು ಅದ್ದೂರಿಯಾಗಿ ನೆರವೇರಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ತೆಲುಗು ಟೈಟಾನ್ಸ್ ತಂಡದ ಕಬಡ್ಡಿ ಆಟಗಾರರಾದ ರತನ್ ನಾಯ್ಕ ‘ಒಬ್ಬ ಶ್ರೇಷ್ಠ ಆಟಗಾರನಾಗಬೇಕಾದರೆ ಇಂತಹ ವೇದಿಕೆಗಳು ಅತ್ಯದ್ಭುತ, ಧೈರ್ಯ ತುಂಬಿ ಆಟ ಆಡಿ. ಕ್ರೀಡೆಯಿಂದ ಬದುಕು ಕಟ್ಟಿಕೊಳ್ಳಲು ಸಾಧ್ಯವಿದೆ ಎಂದರು’.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ ಮೊಗವೀರ ಅವರು ಶಿಕ್ಷಣ ಪರಿಪೂರ್ಣವಾಗಬೇಕಾದರೆ ಪಠ್ಯದ ಜೊತೆಗೆ ಸಹಪಠ್ಯ ಚಟುವಟಿಕೆಗಳು ಪ್ರಮುಖವಾದದ್ದು ಆ ನೆಲೆಯಲ್ಲಿ ನಮ್ಮ ಸಂಸ್ಥೆಯಲ್ಲಿ ಸಮಾನ ಪ್ರಾಧಾನ್ಯತೆ ನೀಡುತ್ತಿದ್ದು,ವಿದ್ಯಾರ್ಥಿ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಸೋಲು – ಗೆಲುವು ಇವೆರೆಡನ್ನು ಸಮನಾಗಿ ಸ್ವೀಕರಿಸಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು .
ಮುಖ್ಯ ಅತಿಥಿಯಾಗಿ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ ನಾಯ್ಕ ಅವರು ಮಾತನಾಡಿ, ಶೈಕ್ಷಣಿಕ ಪ್ರಗತಿಯಲ್ಲಿ ಶುಭದಾ ಶಾಲೆಯ ಕಾರ್ಯಚಟುವಟಿಕೆಗಳು ಅತ್ಯುತ್ತಮವಾಗಿ ಮೂಡಿ ಬರುತ್ತಿವೆ ಎಂದು ಶುಭ ಹಾರೈಸಿದರು.
ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಅರುಣ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನು ನುಡಿದರು. ಸಮಾರಂಭದಲ್ಲಿ ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ ಹಾಗೂ ಬೋಧಕ / ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು, ಕ್ರೀಡಾಪಟುಗಳು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಸ್ವಾಗತಿಸಿ, ಸಹ – ಶಿಕ್ಷಕಿ ಶಾಂಭವಿ ವಂದಸಿ, ಶಿಕ್ಷಕ ಸುಬ್ರಹ್ಮಣ್ಯ ಮರಾಟಿ ಕಾರ್ಯಕ್ರಮವನ್ನು ನಿರೂಪಿಸಿದರು.