ಉಡುಪಿ: ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ, ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟವು ಹೆಜಮಾಡಿ ಕ್ರೀಡಾಂಗಣದಲ್ಲಿ, ಕುಂದಾಪುರ ಮತ್ತು ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಕುಂದಾಪುರ ತಾಲೂಕು ಕ್ರೀಡಾಂಗಣದಲ್ಲಿ ಹಾಗೂ ಕಾರ್ಕಳ ಮತ್ತು ಹೆಬ್ರಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಕಾರ್ಕಳ ತಾಲೂಕು ಕ್ರೀಡಾಂಗಣದಲ್ಲಿ ಸೆಪ್ಟಂಬರ್ 22 ರಂದು ನಡೆಯಲಿದೆ.

Call us

Click Here

ಸ್ಪರ್ಧೆಗಳ ವಿವಿರ: 
ಪುರುಷರಿಗೆ: ಅಥ್ಲೆಟಿಕ್ಸ್( 100ಮೀ, 200 ಮೀ, 400 ಮೀ, 800 ಮೀ, 1500 ಮೀ, 5000 ಮೀ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 110 ಮೀ ಹರ್ಡಲ್ಸ್, 4*100 ಮೀ ರಿಲೇ, 4*400 ಮೀ ರಿಲೇ.), ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ, ಫುಟ್‌ಬಾಲ್ ಹಾಗೂ ಥ್ರೋಬಾಲ್ ಸ್ಪರ್ಧೆಗಳು ನಡೆಯಲಿವೆ.

ಮಹಿಳೆಯರಿಗೆ: ಅಥ್ಲೆಟಿಕ್ಸ್ ( 100ಮೀ, 200 ಮೀ, 400 ಮೀ, 800 ಮೀ, 1500 ಮೀ, 3000 ಮೀ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 100 ಮೀ ಹರ್ಡಲ್ಸ್, 4*100 ಮೀ ರಿಲೇ, 4*400 ಮೀ ರಿಲೇ.), ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ ಹಾಗೂ ಥ್ರೋಬಾಲ್ ಸ್ಪರ್ಧೆಗಳು ನಡೆಯಲಿವೆ.

ಭಾಗವಹಿಸುವ ಸ್ಪರ್ಧಿಗಳು ಅಂದು ಬೆಳಗ್ಗೆ 9 ಗಂಟೆಯ ಒಳಗಾಗಿ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, 9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.   

Leave a Reply