ಕುಂದಾಪ್ರ ಡಾ ಕಾಂ ಸುದ್ದಿ.
ಕುಂದಾಪುರ: ವಂಡ್ಸೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ ಅಲ್ಲಿ ಬುಧವಾರ ನಡೆಯಿತು.
ವಂಡ್ಸೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಡಾ.ಪೂರ್ಣಿಮಾ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಂಡ್ಸೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಅವಿನಾಶ್, ಉಪಾಧ್ಯಕ್ಷ ಗೋವರ್ಧನ್ ಜೋಗಿ, ಗ್ರಾ.ಪಂ ಸದಸ್ಯ, ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ ಅಡಿಕೆಕೊಡ್ಲು, ಶ್ರೀ ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಕೋಶಾಧಿಕಾರಿ ಗಿಳಿಯಾರು ಶ್ರೀಧರ್ ಶೆಟ್ಟಿ, ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್‌ನ ಟ್ರಸ್ಟಿ ಅನಂದ ಶೆಟ್ಟಿ ಸಬ್ಲಾಡಿ, ಗ್ರಾ.ಪಂ. ಮಾಜಿ ಸದಸ್ಯ ಗುಂಡು ಪೂಜಾರಿ ಹರವರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂದೇಶ ಶೆಟ್ಟಿ ಹಾಗೂ ಕರ್ಕುಂಜೆ, ಹೊಸಾಡು, ಕೊಲ್ಲೂರು ಸಿ.ಆರ್.ಪಿಗಳು ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಿದರು. ಈ ಸಂದರ್ಭದಲ್ಲಿ ವಂಡ್ಸೆ ಸ.ಮಾ.ಹಿ.ಪ್ರಾ.ಶಾಲೆಯ ಡಿಜಿಟಲ್ ಮ್ಯಾಗಜಿನ್ ಉದ್ಘಾಟನೆ ಮಾಡಲಾಯಿತು. ಪ್ರತಿಭಾ ಕಾರಂಜಿಯ ನೋಡಲ್ ಹಾಗೂ ಶಿಕ್ಷಣ ಸಂಯೋಜಕರಾದ ಸತ್ಯನಾ ಕೊಡೇರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಎಂ. ನಾಗರಾಜ್ ಶೆಟ್ಟಿ ಸ್ವಾಗತಿಸಿದರು. ಆತಿಥೇಯ ಶಾಲೆಯ ಮುಖ್ಯ ಶಿಕ್ಷಕ ಸದಾಶಿವ ಕೆಂಚನೂರು ವಂದಿಸಿದರು. ಶಾಲೆಯ ದೈಹಿಕ ಶಿಕ್ಷಕ ರಾಜು ಎನ್. ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಎಲ್ಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಸಹಕರಿಸಿದರು.