ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಹಜ್ ಭವನದಲ್ಲಿ ಐ.ಎ.ಎಸ್ ಹಾಗೂ ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು, ಸದರಿ ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯದ 21 ರಿಂದ 35 ವರ್ಷದೊಳಗಿನ ಪದವಿ ಅಭ್ಯರ್ಥಿಗಳಿಂದ ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 10ರ ವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.