ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಭಾಗವಹಿಸಿ, ಪ್ರಥಮ ಸ್ಥಾನ ಪಡೆದು ವಲಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ..

ವಿದ್ಯಾರ್ಥಿಗಳಾದ ಹೊನ್ನುಶ್ರೀ (ಇಂಗ್ಲೀಷ ಕಠಪಾಠ), ಮೊಹಮ್ಮದ್‌ನಬಾನ್ (ಅರೇಬಿಕ್ ಧಾರ್ಮಿಕ ಪಠಣ), ಹರ್ಷಾಲಿ (ಛದ್ಮವೇಷ), ಆರಾಧ್ಯ ದೇವಾಡಿಗ (ಚಿತ್ರ ಕಲೆ) ಆಯ್ಕೆಯಾಗಿದ್ದಾರೆ.
ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.










