ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಕೋಡಿ ಶ್ರೀರಾಮ ವಿದ್ಯಾಕೇಂದ್ರ ಇವರ ಆಶ್ರಯದಲ್ಲಿ ವಡೇರಹೋಬಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಕೋಡಿ ಶ್ರೀರಾಮ ನಗರದ ಶ್ರೀ ರಾಮ ವಿದ್ಯಾ ಕೇಂದ್ರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ಜರುಗಿತು.
ಸಮಾರಂಭದ ಅಧ್ಯಕ್ಷತೆಯನ್ನು ಶ್ರೀರಾಮ ವಿದ್ಯಾ ಕೇಂದ್ರ ಸಂಚಾಲಕ ಕೆ.ನಾಗೇಶ್ ಕಾಮತ್ ವಹಿಸಿದ್ದರು. ಕುಂದಾಪುರ ಪುರಸಭಾ ಸದಸ್ಯ ಮೊಹಮ್ಮದ್ ಅಶ್ಫಾಕ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಪ್ರತಿಭಾ ಕಾರಂಜಿಯ ನೋಡಲ್ ಅಧಿಕಾರಿ ಶೇಖರ್ ಪಡುಕೋಣೆ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಸಂತೋಷ್ ಕುಮಾರ್ ಶೆಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಣೇಶ್ ಕುಮಾರ್ ಶೆಟ್ಟಿ, ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ಪ್ರೌಢಶಾಲಾ ಸಹ ಶಿಕ್ಷಕ ಸಂಘದ ಕಾರ್ಯದರ್ಶಿ ಪಿಯೂಸ್ ಡಿಸೋಜಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಖಜಾಂಚಿ ಶ್ರೀನಾಥ್ ಪೂಜಾರಿ, ಪತ್ರಕರ್ತ ಬಿ. ರಾಘವೇಂದ್ರ ಪೈ, ಸಮೂಹ ಸಂಪನ್ಮೂಲ ವ್ಯಕ್ತಿ ಮಂಜುನಾಥ ಪಾಳ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ರೇಖಾ ಮತ್ತು ಪ್ರದೀಪ್ ಕುಮಾರ್ ಶೆಟ್ಟಿ, ಶ್ರೀರಾಮ ವಿದ್ಯಾ ಕೇಂದ್ರದ ಪ್ರಾಂಶುಪಾಲ ಜಿತೇಂದ್ರ ಹಾಗೂ ವಿದ್ಯಾರ್ಥಿ ಮುಖಂಡ ಸೃಜನ್ ಪೂಜಾರಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ತೀರ್ಪುಗಾರರಾಗಿ ಆಗಮಿಸಿದ ವಿವಿಧ ಶಾಲೆಯ ಶಿಕ್ಷಕ ಶಿಕ್ಷಕಿಯವರನ್ನು ಗೌರವಿಸಲಾಯಿತು.
ಶಿಕ್ಷಕಿ ಪ್ರಣಿತ ಸ್ವಾಗತಿಸಿದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಸಂತೋಷ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕರಾದ ಮಹೇಶ್ ವಕ್ವಾಡಿ ಮತ್ತು ನಾಗರತ್ನ ಗಣೇಶ್ ಕಾರ್ಯಕ್ರಮ ನಿರೂಪಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿ ಮಂಜುನಾಥ ಪಾಳ್ ವಂದಿಸಿದರು.