ಸೆ.15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲೆಯಲ್ಲಿ 107 ಕಿ.ಮೀ ಮಾನವ ಸರಪಳಿ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ,ಸೆ.06:
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನರಿಗೆ ತಲುಪಿಸುವ ಮಹತ್ವದ ಉದ್ದೇಶದೊಂದಿಗೆ ಸೆಪ್ಟೆಂಬರ್ 15 ರಂದು ಬೆಳಗ್ಗೆ  9.30 ರಿಂದ 10.30 ರ ವರೆಗೆ ಜಿಲ್ಲೆಯ ಗಡಿಭಾಗ ಗಳಾದ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ನಿಂದ ಕಾಪು ತಾಲೂಕಿನ ಹೆಜಮಾಡಿ ಸೇತುವೆ ವರೆಗೆ ರಾಷ್ಟ್ರೀಯ ಹೆದ್ದಾರಿ – 66ರಲ್ಲಿ  ಸುಮಾರು 107 ಕಿ. ಮೀ ಉದ್ದದ ಮಾನವ ಸರಪಳಿ ರಚನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Call us

Click Here

ಜಿಲ್ಲಾ ಮಟ್ಟದ ವೇದಿಕೆ ಕಾರ್ಯಕ್ರಮವನ್ನು ಉಡುಪಿಯ ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ ಆಯೋಜಿಸಲಾಗಿದ್ದು, ತಾಲೂಕು ಮಟ್ಟದಲ್ಲಿ ಮರವಂತೆ ಕುಂದಾಪುರ ಬ್ರಹ್ಮಾವರ ಹಾಗೂ ಉಚ್ಚಿಲದಲ್ಲಿ ಆಯೋಜಿಸಲಾಗಿದೆ.

ಅಂದು ಬೆಳಗ್ಗೆ 9:30 ರಿಂದ 9:37 ರವರೆಗೆ ಮಾನವ ಸರಪಳಿಯಲ್ಲಿ ಭಾಗವಹಿಸುವರು ಸರತಿ ಸಾಲಿನಲ್ಲಿ ನಿಲ್ಲುವುದು, 9:37 ರಿಂದ 9.40 ರವರೆಗೆ ನಾಡಗೀತೆ ,ರಿಂದ9-40ರಿಂದ 9-55ರವರೆಗೆ ಮುಖ್ಯ ಅತಿಥಿಗಳ ಭಾಷಣ,9-55 ರಿಂದ 9 -57 ರವರೆಗೆ ಸಂವಿಧಾನ ಪ್ರಸ್ತಾವನೆ ಓದುವುದು ,9:57 ರಿಂದ 9-59 ಗಂಟೆಯವರೆಗೆ ಮಾನವ ಸರಪಳಿಗೆ ಕೈ ಹಿಡಿದು ನಿಲ್ಲುವುದು 10:00 ಗಂಟೆಗೆ ಎರಡು ಕೈಯಗಳನ್ನು ಮೇಲೆತ್ತಿ ಜೈ ಹಿಂದ್  ಜೈ ಕರ್ನಾಟಕ ಘೋಷಣೆ ಕೂಗುವುದು ರೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳ್ಳಲಿದೆ. ನಂತರ ಸಿಹಿ ತಿಂಡಿ ವಿತರಣೆ ನಡೆಯಲಿದೆ. ನಂತರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಲಿದೆ ತಾಲೂಕು ಮಟ್ಟದ ಕಾರ್ಯಕ್ರಮದಲ್ಲಿ ಚಿತ್ರ ಶಿರ್ಷಿಕೆ ಪ್ರದರ್ಶನ ಸಹ ನಡೆಯಲಿದೆ.ಮಾನವ ಸರಪಳಿಯಲ್ಲಿ ಭಾಗವಹಿಸುವರು ತಮ್ಮ ಹೆಸರನ್ನು https://www.democracydaykarnataka.in/registration ನಲ್ಲಿ ನೊಂದಾಯಿಸಿಕೊಂಡು  ಪ್ರಮಾಣಪತ್ರವನ್ನು ಪಡೆಯಬಹುದಾಗಿದೆ.

ಮಾನವ ಸರಪಳಿಯು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುವುದರಿಂದ ಸೆಪ್ಟೆಂಬರ್ 15ರ ಬೆಳಗ್ಗೆ 8:30 ರಿಂದ 10:30ರ ವರೆಗೆ ಏಕಮುಖ ಸಂಚಾರ ಇರುತ್ತದೆ. ರಾಷ್ಟ್ರೀಯ ಹೆದ್ದಾರಿಯ ಎಡ ಭಾಗದಲ್ಲಿ(ಬೈಂದೂರು ನಿಂದ ಹೆಜಮಾಡಿ ಹೋಗುವಾಗ ) ವಾಹನಗಳಿಗೆ ಅವಕಾಶ ಮಾಡಿಕೊಡಲಾಗಿದೆ.   ಬಲಭಾಗದಲ್ಲಿ (ಸಮುದ್ರದ ಕಡೆಯಲ್ಲಿ)ಮಾನವ ಸರಪಳಿ ಇರುತ್ತದೆ. ಆ ಸಂದರ್ಭದಲ್ಲಿ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಚಾಲಕರು ನಿಧಾನಗತಿಯಲ್ಲಿ ವಾಹನಗಳನ್ನು ಚಲಾಯಿಸುವಂತೆ ಕೋರಿದ್ದಾರೆ.

ರಾಷ್ಟ್ರ ಧ್ವಜ ಹಾಗೂ ಕರ್ನಾಟಕ ರಾಜ್ಯದ ಧ್ವಜಗಳನ್ನು ಈ  ಸಂದರ್ಭದಲ್ಲಿ ಪ್ರದರ್ಶಿಸಲಾಗುವುದು. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸರಕಾರಿ ಹಾಗೂ ಸರಕಾರೇತರ ಸಂಘ ಸಂಸ್ಥೆಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಕಾಲೇಜುಗಳ ಉಪನ್ಯಾಸಕರು, ವಿದ್ಯಾರ್ಥಿಗಳು, ಅಂಗವಿಕಲರು  ಸೇರಿದಂತೆ ಸುಮಾರು ಒಂದು ಲಕ್ಷಕ್ಕೂ ಜನರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ತಿಳಿಸಿದ್ದಾರೆ.

Click here

Click here

Click here

Click Here

Call us

Call us

Leave a Reply