Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕನ್ನಡ ಭಾಷೆ ನಾಡಿನ ಜನತೆಯ ಉಸಿರಾಗಲಿ: ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು
    ಉಡುಪಿ ಜಿಲ್ಲೆ

    ಕನ್ನಡ ಭಾಷೆ ನಾಡಿನ ಜನತೆಯ ಉಸಿರಾಗಲಿ: ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಕರ್ನಾಟಕ ನಾಮಕರಣಗೊಂಡು 50 ಸಂವತ್ಸರಗಳು ಪೂರೈಸುತ್ತಿರುವ ಈ ಸಂದರ್ಭದಲ್ಲಿ ಕನ್ನಡ ಭಾಷೆ ನಾಡಿನ ಕನ್ನಡಿಗರ ಉಸಿರಾಗಲಿ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾರೈಸಿದರು.

    Click Here

    Call us

    Click Here

    ಅವರು ಅಂದು ನಗರದ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಆಯೋಜಿಸಲಾಗುತ್ತಿರುವ ಸುವರ್ಣ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ಆಶ್ರಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಆರ್ಟಿಸ್ಟ್ ಫೋರಂ ಸಹಯೋಗದೊಂದಿಗೆ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ಚಿತ್ರಕಲಾ ಸ್ಪರ್ಧೆ ಉದ್ಘಾಟಿಸಿ ಆಶೀರ್ವಚನ ನೀಡಿದರು.

    ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಶುಭ ಹಾರೈಸಿದ ಶ್ರೀಪಾದರು, ಬಹುಮಾನ ಗಳಿಕೆಗಿಂತ ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆ ಮುಖ್ಯ. ಸ್ಪರ್ಧಾ ಮನೋಭಾವ ಮಕ್ಕಳಲ್ಲಿರಬೇಕು ಎಂದರು.  

    ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಹು ಭಾಷೆ, ಬಹು ಕಲೆ – ಸಂಸ್ಕೃತಿಯ ಈ ಕರಾವಳಿ ಭಾಗದಲ್ಲಿ ಮುಂದಿನ ತಿಂಗಳು ಮಂಗಳೂರಿನಲ್ಲಿ ನಡೆಯುವ ಬಹು ಸಂಸ್ಕೃತಿ ಉತ್ಸವಕ್ಕೆ ಪೂರಕವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬೇರೆ ಬೇರೆ ಸ್ಪರ್ಧೆಗಳನ್ನು ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದೆ. ವಿದ್ಯಾರ್ಥಿಗಳು ಚಿಕ್ಕನಿಂದಲೇ ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುದರ ಮೂಲಕ ನಮ್ಮ ರಾಷ್ಟ್ರೀಯ ಹಬ್ಬಗಳು, ಆಚಾರ- ವಿಚಾರ, ಸಂಸ್ಕೃತಿಯನ್ನು ಮೈಗೊಡಿಸಿಕೊಂಡು ದೇಶದ ಸುಸಂಸ್ಕೃತ ಪ್ರಜೆಯಾಗಿ ಬದುಕು ಕಟ್ಟಿಕೊಳ್ಳಬೇಕೆಂದದರು.

    ಜಿಲ್ಲಾಮಟ್ಟದ ಈ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಥಮ ಬಹುಮಾನ 3,000 ರೂ., ದ್ವಿತೀಯ ಬಹುಮಾನ 2,000 ರೂ., ತೃತೀಯ ಬಹುಮಾನ 1,000 ರೂ. ನಗದು  ಹಾಗೂ 5 ಸಮಾಧಾನಕರ ಬಹುಮಾನಗಳು ಮತ್ತು ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನಾ ಪ್ರಮಾಣ ಪತ್ರವನ್ನು ಮಂಗಳೂರು ವಲಯ ಮಟ್ಟದ ಕಾರ್ಯಕ್ರಮದಲ್ಲಿ ನೀಡಲಾಗುವುದು ಎಂದರು.

    Click here

    Click here

    Click here

    Call us

    Call us

    ಕಾರ್ಯಕ್ರಮದಲ್ಲಿ ಆರ್ಟಿಸ್ಟ್ ಫೋರಂ ಅವರಿಂದ ಸ್ಪರ್ಧೆ ವಿಜೇತ ಮಕ್ಕಳಿಗೆ ನಗದು ಬಹುಮಾನ ನೀಡಲಾಯಿತು.

    ಕಾರ್ಯಕ್ರಮದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಕಾಮತ್, ಆರ್ಟಿಸ್ಟ್ ಫೋರಂ ಉಡುಪಿ ಕಾರ್ಯದರ್ಶಿ ಸಕು ಪಾಂಗಾಳ, ಶ್ರೀಮಠದ ಕಾರ್ಯದರ್ಶಿ ಪ್ರಸನ್ನಾಚಾರ್ಯ ಉಪಸ್ಥಿತರಿದ್ದರು.

    ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು.  ಶ್ರೀ ಕೃಷ್ಣಮಠದ ಸಾಂಸ್ಕೃತಿಕ ಕಾರ್ಯದರ್ಶಿ ರಮೇಶ್ ಭಟ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

    07/07/2026

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026
    Leave A Reply Cancel Reply

    three + twelve =

    Call us

    Click Here

    Call us

    Call us

    Call us
    Highest Viewed Recently
    • ತ್ರಾಸಿ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಮೃತ್ಯು, ತಂದೆ ಮತ್ತು ಮಗಳಿಗೆ ಗಾಯ
    • ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ
    • ಜಾನುವಾರುಗಳ ಸಂಖ್ಯೆ ಗಣನೀಯ ಇಳಿಕೆ ಆಗಿರುವುದು ಆತಂಕ ಪಡುವ ವಿಚಾರ: ಶಾಸಕ ಗುರುರಾಜ್‌ ಗಂಟಿಹೊಳೆ
    • ಕೊಲ್ಲೂರು ದೇವಾಸ್ಥಾನದಲ್ಲಿ 80 ಸಾವಿರ ರೂ. ಕಳ್ಳತನ, ಮೂವರು ಮಹಿಳಾ ಆರೋಪಿಗಳ ಬಂಧನ
    • ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.