ಕುಂದಾಪುರ – ಬೈಂದೂರು ತಾಲೂಕು ಸೇರಿದಂತೆ ಜಿಲ್ಲಾದ್ಯಂತ ಮಾನವ ಸರಪಳಿಗೆ ಚಾಲನೆ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನರಿಗೆ ತಲುಪಿಸುವ ಮಹತ್ವದ ಉದ್ದೇಶದೊಂದಿಗೆ ರಾಜ್ಯಾದ್ಯಂತ ಆಯೋಜಿಸಲಾದ ಮಾನವ ಸರಪಳಿಗೆ ಭಾನುವಾರ ಜಿಲ್ಲಾದ್ಯಂತ ಏಕಕಾಲದಲ್ಲಿ ಚಾಲನೆ ದೊರೆಯಿತು. ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿಯೂ ಕಾರ್ಯಕ್ರಮವನ್ನು ಆಚರಿಸಲಾಯಿತು.

Call us

Click Here

ಶಿರೂರು ಟೋಲ್ ಗೇಟ್ ನಿಂದ ಕಾಪು ತಾಲೂಕಿನ ಹೆಜಮಾಡಿ ಸೇತುವೆ ತನಕ ರಾಷ್ಟ್ರೀಯ ಹೆದ್ದಾರಿ – 66ರಲ್ಲಿ  ಪ್ರತಿ ಗ್ರಾಮ ವ್ಯಾಪ್ತಿ, ಪುರಸಭೆ, ನಗರಸಭೆ ಹಾಗೂ ಪಟ್ಟಣ ಪಂಚಾಯತ್‌ ವ್ಯಾಪ್ತಿಕಯಲ್ಲಿ ಮಾನವ ಸರಪಳಿ ರಚಿಸಲಾಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಾಡಗೀತೆಯಿಂದ ಆರಂಭಗೊಂಡು ಸಂವಿಧಾನ ಪ್ರಸ್ತಾವನೆ ಓದುವುದು, ಮಾನವ ಸರಪಳಿಗೆ ಕೈ ಹಿಡಿದು ನಿಂತ ಬಳಿಕ ಎರಡು ಕೈಯಗಳನ್ನು ಮೇಲೆತ್ತಿ ಜೈ ಹಿಂದ್ ಜೈ ಕರ್ನಾಟಕ ಘೋಷಣೆ ಕೂಗುವ ಮೂಲಕ ಕಾರ್ಯಕ್ರಮ ಮುಕ್ತಾಯಗೊಂಡಿತು. ಬಳಿಕ ರಸ್ತೆಯ ಬದಿಯಲ್ಲಿ ಗಿಡಗಳನ್ನು ನೆಡಲಾಯಿತು.

ಕುಂದಾಪುರದಲ್ಲಿ ಶಾಸಕ ಕಿರಣ್‌ ಕುಮಾರ್‌ ಕೊಡ್ಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರೆ, ಪುರಸಭೆ ಅಧ್ಯಕ್ಷ ಮೋಹನದಾಸ್‌ ಶೆಣೈ, ಸಹಾಯಕ ಆಯುಕ್ತ ಮಹೇಶಚಂದ್ರ, ತಹಶಿಲ್ದಾರ್‌ ಶೋಭಾಲಕ್ಷ್ಮೀ, ಮಾಜಿ ಸಂಸದ ಜಯಪ್ರಕಾಶ್‌ ಹೆಗ್ಡೆ, ಮುಖಂಡರಾದ ದಿನೇಶ್‌ ಹೆಗ್ಡೆ ಮೊಳಹಳ್ಳಿ, ತಾಲೂಕು ಪಂಚಾಯತ್‌ ಇಓ ಶಶಿಧರ್, ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಬೈಂದೂರು ಕ್ಷೇತ್ರದ ಮರವಂತೆಯಲ್ಲಿ ಶಾಸಕ ಗುರುರಾಜ ಗಂಟಿಹೊಳೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಬೈಂದೂರು ತಹಶಿಲ್ದಾರ್‌ ಪ್ರದೀಪ್‌, ತಾಪಂ ಇಓ ಭಾರತಿ, ಗಂಗೊಳ್ಳಿ ಪಿಎಸೈ ಹರೀಶ್‌, ತ್ರಾಸಿ ಪಂಚಾಯತ್‌ ಅಧ್ಯಕ್ಷ ಮಿಥುನ್‌ ದೇವಾಡಿಗ, ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು. ಶಿರೂರು ಟೋಲ್‌ ಬಳಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಭಾಗವಹಿಸಿದರು.

ಜಿಲ್ಲಾ ಮಟ್ಟದಲ್ಲಿ ನಡೆದ ಕಾರ್ಯಕ್ರಮವನ್ನು ಚಂಡೆ ಬಾರಿಸುವ ಮೂಲಕ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ,  ಚಾಲನೆ ನೀಡಿದರು ಇದೇ ನಂತರ ಮಾತನಾಡಿ, ಸಂವಿಧಾನದ ಮೌಲ್ಯಗಳನ್ನು ಎಲ್ಲೆಡೆ ಪಸರಿಸುವ ಉದ್ದೇಶದಿಂದ ವಿನೂತನವಾದ ಮಾನವ ಸರಪಳಿ ಕಾರ್ಯಕ್ರಮವನ್ನು ರಾಜ್ಯ ಸರ್ಕಾರವು ಆಯೋಜಿಸಿದ್ದು, ಪ್ರಜಾಪ್ರಭುತ್ವವು ಇನ್ನಷ್ಟು ಗಟ್ಟಿಗೊಂಡು ಪ್ರತಿಯೊಬ್ಬರ ಬದುಕಿನ ಭಧ್ರ ಬುನಾದಿಯಾಗಲಿ ಎಂದರು.

Click here

Click here

Click here

Click Here

Call us

Call us

ಶಿರೂರು ಟೋಲ್‌ ಬಳಿ ವಿಶೇಷ ಸ್ವಾಗತ ಕಮಾನು, ರಂಗೋಲಿ ಬಿಡಿಸಿ ಸ್ವಾಗತಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ವಿವಿಧೆಡೆ ನೃತ್ಯ, ಜಾಥಾ, ಟ್ಯಾಬ್ಲೋ, ಚಂಡೆ, ಸ್ವಾಗತ ಕಮಾನು, ರಂಗೋಲಿ, ಚಂಡೆಗಳ ವಿಶೇಷ ಮೆರಗು ಗಮನ ಸೆಳೆಯಿತು.

ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್ ಗಂಗಣ್ಣವರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಡಿ.ಎಫ್.ಒ ಗಣಪತಿ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ. ಜಿ.ಎಸ್ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ನಗರಸಭೆಯ ಅಧ್ಯಕ್ಷ ಪ್ರಭಾಕರ್ ಪೂಜಾರಿ, ರೋಟರಿಯ ಗರ್ವನರ್ ದೇವಾನಂದ್, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Leave a Reply