ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಬೃಹತ್ ಮಾನವ ಸರಪಳಿ ರಚನೆ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನರಿಗೆ ತಲುಪಿಸುವ ಮಹತ್ವದ ಉದ್ದೇಶದೊಂದಿಗೆ ರಾಜ್ಯದಲ್ಲಿ ಬೀದರ್ ನಿಂದ ಚಾಮರಾಜನಗರದವರೆಗೆ 250 ಕಿ.ಮೀನ ಮಾನವ ಸರಪಳಿಯನ್ನು ಆಯೋಜಿಸಿದ್ದು, ಇದರ ಭಾಗವಾಗಿ ಜಿಲ್ಲೆಯ ಗಡಿಭಾಗಗಳಾದ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್‌ನಿಂದ ಕಾಪು ತಾಲೂಕಿನ ಹೆಜಮಾಡಿ ಸೇತುವೆವರೆಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸುಮಾರು 107 ಕಿ. ಮೀ ಉದ್ದದ ಮಾನವ ಸರಪಳಿ ರಚನೆ ಕಾರ್ಯಕ್ರಮವು ನಡೆಯಿತು.

Call us

Click Here

ಜಿಲ್ಲಾ ಮಟ್ಟದ ವೇದಿಕೆ ಕಾರ್ಯಕ್ರಮವನ್ನು ಉಡುಪಿಯ ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ, ತಾಲೂಕು ಮಟ್ಟದಲ್ಲಿ ಮರವಂತೆ ಕುಂದಾಪುರ ಬ್ರಹ್ಮಾವರ ಹಾಗೂ ಉಚ್ಚಿಲದಲ್ಲಿ ನಡೆಯಿತು. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪರಸ್ಪರ ಕೈಯನ್ನು ಹಿಡಿದುಕೊಂಡು ಮಾನವ ಸರಪಳಿ ರಚಿಸಿದರು.

ಜಿಲ್ಲಾ ಮಟ್ಟದಲ್ಲಿ ನಡೆದ ಕಾರ್ಯಕ್ರಮವನ್ನು ಚಂಡೆ ಬಾರಿಸುವ ಮೂಲಕ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಚಾಲನೆ ನೀಡಿ ಮಾತನಾಡಿ, ಸಂವಿಧಾನದ ಮೌಲ್ಯಗಳನ್ನು ಎಲ್ಲೆಡೆ ಪಸರಿಸುವ ಉದ್ದೇಶದಿಂದ ವಿನೂತನವಾದ ಮಾನವ ಸರಪಳಿ ಕಾರ್ಯಕ್ರಮವನ್ನು ರಾಜ್ಯ ಸರ್ಕಾರವು ಆಯೋಜಿಸಿದ್ದು, ಪ್ರಜಾಪ್ರಭುತ್ವವು ಇನ್ನಷ್ಟು ಗಟ್ಟಿಗೊಂಡು ಪ್ರತಿಯೊಬ್ಬರ ಬದುಕಿನ ಭಧ್ರ ಬುನಾದಿಯಾಗಲಿ ಎಂದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣವರ್ ಮಾತನಾಡಿ, ನಮ್ಮ ಜವಾಬ್ದಾರಿಗಳ ಅರ್ಥೈಸಿಕೊಂಡಾಗ ಮಾತ್ರ ನಮ್ಮ ಹಕ್ಕುಗಳಿಗೆ ಅರ್ಥ ಬರುತ್ತದೆ. ನಾಗರಿಕನ ಜವಾಬ್ದಾರಿಯುತ ನಡವಳಿಕೆಯಿಂದ ದೇಶದ ಶಾಂತಿ ಸುವ್ಯವಸ್ಥೆ ಚೆನ್ನಾಗಿರುತ್ತದೆ. ಸಂವಿಧಾನದ ಆಶಯಗಳನ್ನು ನಮ್ಮ ನಡವಳಿಕೆಯಲ್ಲಿ ತೋರಿಸಬೇಕು. ಸಂವಿಧಾನದ ವಿಚಾರಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮರ ಬಲಿದಾನಗಳಿಗೆ ಅರ್ಥ ನೀಡಬೇಕು ಎಂದರು.

ಪ್ರತಿ ಪ್ರಜೆಯನ್ನು ನಮ್ಮ ಸಂವಿಧಾನ ಪ್ರಭು ಎಂದು ಒಪ್ಪಿಕೊಂಡಿದೆ. ಸಂವಿಧಾನವನ್ನು ನಿರ್ವಹಿಸುವ ಜನರು ಎಷ್ಟು ಉತ್ತಮವಾಗಿರುತ್ತಾರೋ ಸಂವಿಧಾನವು ಅಷ್ಟೇ ಉತ್ತಮವಾಗಿರುತ್ತದೆ ಎಂದರು.

Click here

Click here

Click here

Click Here

Call us

Call us

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ರಚಿಸಿದ “ಪ್ರಜಾಪ್ರಭುತ್ವ ಆಶಯದ ಕಿರು ಹೊತ್ತಿಗೆಯನ್ನು” ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಚಂಡೆ ಹಾಗೂ ಕಂಗೀಲು, ಯಕ್ಷಗಾನ ಕಲಾವಿದರು ಹಾಗೂ ವಿವಿಧ ಕಲಾ ತಂಡಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. 500 ಮೀ ಉದ್ದದ ರಾಷ್ಟ್ರ ಧ್ವಜ ಹಾಗೂ ಕರ್ನಾಟಕ ರಾಜ್ಯದ ನಾಡ ಧ್ವಜವನ್ನು ಕೈಯಲ್ಲಿ ಹಿಡಿದು ಪ್ರದರ್ಶಿಸಲಾಯಿತು.

ಮಾನವ ಸರಪಳಿ ಕಾರ್ಯಕ್ರಮದಲ್ಲಿ ಎರಡು ಕೈಯಗಳನ್ನು ಮೇಲೆತ್ತಿ ಜೈ ಹಿಂದ್ ಜೈ ಕರ್ನಾಟಕ ಘೋಷಣೆ ಕೂಗುವುದರೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳಿಸಲಾಯಿತು. ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಿಡಗಳನ್ನು ವಿತರಿಸಲಾಯಿತು.   

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಡಿ.ಎಫ್.ಒ ಗಣಪತಿ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ. ಜಿ.ಎಸ್ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ನಗರಸಭೆಯ ಅಧ್ಯಕ್ಷ ಪ್ರಭಾಕರ್ ಪೂಜಾರಿ, ರೋಟರಿಯ ಗರ್ವನರ್ ದೇವಾನಂದ್, ಸಹಕಾರಿ ಸಂಘದ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ, ಸ್ವಾತಂತ್ರ್ಯಯ ಹೋರಾಟಗಾರ ಮಲ್ಪೆ ರಾಘವೇಂದ್ರ, ರೋಟರಿಯ ಕ್ಲಬ್‌ನ ಸದಸ್ಯರು, ಸಂಘ-ಸಂಸ್ಥೆಯ ಪದಾಧಿಕಾರಿಗಳು, ಯುವಕ-ಯುವತಿ ಮಂಡಳಿಗಳು, ಸ್ವ-ಸಹಾಯ ಸಂಘದ ಸದಸ್ಯರುಗಳು, ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply