ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕಶಾಸ್ತ್ರ ವಿಭಾಗ ಮತ್ತು ಪ್ಲೇಸ್ಮೆಂಟ್ ಸೆಲ್ ಆಶ್ರಯದಲ್ಲಿ ಅಂತಿಮ ವರ್ಷದ ಬಿ.ಸಿ.ಎ ವಿದ್ಯಾರ್ಥಿಗಳಿಗಾಗಿ “ಕರಿಯರ್ ಗೈಡೆನ್ಸ್” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅವರು ವಹಿಸಿಕೊಂಡಿದ್ದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಕಾಲೇಜಿನ ಡೀನ್ (ಅಕಾಡೆಮಿಕ್ಸ್) ಗಿರಿರಾಜ್ ಭಟ್ ಅವರು “ನಾವು ಸಂದರ್ಶನಕ್ಕೆ ಹೋದಾಗ ಸಲ್ಲಿಸುವ ರೆಸೂಮ್ ಎನ್ನುವುದು ನಮ್ಮ ಸಂಪೂರ್ಣ ಜ್ಞಾನ, ವ್ಯಕ್ತಿತ್ವ, ಸಾಮರ್ಥ್ಯ ಮತ್ತು ಕೌಶಲ್ಯವನ್ನು ಸಂದರ್ಶನಕಾರರಿಗೆ ಮನದಟ್ಟು ಮಾಡಿಸುವಂತಿರಬೇಕು” ಎಂದರು.
ಗಣಕವಿಜ್ಞಾನ ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಪ್ಲೇಸ್ಮೆಂಟ್ ಆಫೀಸರ್ ಸುರೇಶ್ ಕಾಮತ್ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು.
ಗಣಕಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ಜಯಲಕ್ಷ್ಮಿ ಸ್ವಾಗತಿಸಿ, ವೆಂಕಟೇಶ್ ಶೆಟ್ಟಿ ವಂದಿಸಿದರು. ಗಣಕಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ಹರೀಶ್ ಕಾಂಚನ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.
ಬಿ.ಸಿ.ಎ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಂದರ್ಶನವನ್ನು ಎದುರಿಸುವ ಕುರಿತಾಗಿ ಸಂಪೂರ್ಣ ಮಾಹಿತಿ ಹಾಗೂ ತರಬೇತಿಯನ್ನು ನೀಡಲಾಯಿತು.