ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘ 37.29 ಲಕ್ಷ ಲಾಭ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘ ವರದಿ ವರ್ಷದಲ್ಲಿ 130.19 ಕೋಟಿಯಷ್ಟು ವ್ಯವಹಾರ ನಡೆಸಿ, ರೂ 37.29 ಲಕ್ಷ ನಿವ್ವಳ ಲಾಭಗಳಿಸಿದ್ದು, ಮುಂದಿನ ದಿನಗಳಲ್ಲಿ 150 ಕೋಟಿ ರೂ. ವ್ಯವಹಾರದ ಗುರಿ ಹೊಂದಿದೆ ಎಂದು ಸಂಘದ ಅಧ್ಯಕ್ಷ ಮೋಹನ ಪೂಜಾರಿ ಹೇಳಿದರು.

Call us

Click Here

ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಭಾನುವಾರ ನಡೆದ ಸಂಘದ 33ನೇ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಂಘವು ಪ್ರಾರಂಭದಿಂದಲೂ ಲಾಭದಲ್ಲೆ ಮುನ್ನಡೆಯುತ್ತಿದ್ದು, ಕಳೆದ 32 ವರ್ಷಗಳಿಂದಲೂ ನಿರಂತರ ಡಿವಿಡೆಂಡ್ ನೀಡಿರುವ ಹೆಗ್ಗಳಿಕೆಯಿದೆ. ಈ ಬಾರಿ ಶೇ. 12ರಷ್ಟು ಡಿವಿಡೆಂಡ್ ನೀಡಲು ಆಡಳಿತ ಮಂಡಳಿ ನಿರ್ಣಯಿಸಿದೆ. ಮುಂದಿನ ದಿನಗಳಲ್ಲಿ ಸಂಘದ ವತಿಯಿಂದ ರಚನೆಯಾದ ಕಲ್ಪತರು ಮಹಿಳಾ ಸ್ವಸಹಾಯ ಗುಂಪಿನ ಸದಸ್ಯರುಗಳಿಗೆ ಮಾಹಿತಿ ಶಿಬಿರ ಹಾಗೂ ಸಂಘಗಳಿಗೆ ಸಾಲ ಸೌಲಭ್ಯ ನೀಡಿ ಈ ಮೂಲಕ ವ್ಯವಹಾರ ಹೆಚ್ಚಿಸಲಾಗುವುದು. ವರದಿ ವರ್ಷದ ಅಂತ್ಯಕ್ಕೆ ಒಟ್ಟು 173 ಕಲ್ಪತರು ಮಹಿಳಾ ಸ್ವ ಸಹಾಯ ಗುಂಪುಗಳನ್ನು ಹೊಂದಿದ್ದು, ಮಹಿಳಾ ಸಶಕ್ತೀಕರಣಕ್ಕಾಗಿ ಸಾಲ ಸೌಲಭ್ಯ ನೀಡಲಾಗಿದೆ. ಸ್ವಸಹಾಯ ಗುಂಪುಗಳ ಸಾಲದಲ್ಲಿ ಶೇ. 99.03ರಷ್ಟು ವಸೂಲಾತಿ ಆಗಿದೆ ಎಂದರು.

ಈ ಸಂದರ್ಭ ಕುಂದಾಪುರದ ಸಹಕಾರಿ ಸಂಘಗಳ ನಿವೃತ್ತ ಉಪನಿಬಂಧಕ ಅರುಣಕುಮಾರ ಎಸ್.ವಿ., ಸಹಕಾರಿ ಸಂಘಗಳ ಲೆಕ್ಕಪರಿಶೋಧನಾ ನಿವೃತ್ತ ಉಪನಿರ್ದೇಶಕ ಗಣೇಶ ಮಯ್ಯ ಬಿಜೂರು ಹಾಗೂ ನಿವೃತ್ತ ಯೋಧ ವೆಂಕಟೇಶ ಪ್ರಜಾರಿ ಅವರನ್ನು ಸನ್ಮಾನಿಸಲಾಯಿತು. ಕಳೆದ ಬಾರಿ ಎಸ್‌ಎಸ್‌ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯಕ ಅಂಕಪಡೆದ ಸಂಘದ ಸದಸ್ಯ ಮಕ್ಕಳನ್ನು ಸನ್ಮಾನಿಸಿ, ವಿದ್ಯಾರ್ಥಿವೇತನ ನೀಡಿ ಗೌರವಿಸಲಾಯಿತು.

ಉಪಾಧ್ಯಕ್ಷ ತಿಮ್ಮಪ್ಪ ಪೂಜಾರಿ, ನಿರ್ದೇಶಕರಾದ ಹೆಚ್.ನರಸಿಂಹ ಪೂಜಾರಿ, ಬಿ. ನಾರಾಯಣ ಪೂಜಾರಿ, ಮಂಜ ಪೂಜಾರಿ, ರಾಜು ಪೂಜಾರಿ, ಸುರೇಶ ಪೂಜಾರಿ, ಸಂತೋಷ, ಶಾರದಾ, ಲಕ್ಷ್ಮೀ ಉಪಸ್ಥಿತರಿದ್ದರು.

Click here

Click here

Click here

Click Here

Call us

Call us

ಮುಖ್ಯ ಕಾರ್ಯನಿರ್ವಹಣಾಕಾರಿ ಮಹೇಶ್ ಹೆಚ್. ವಾರ್ಷಿಕ ವರದಿ, ಲೆಕ್ಕಪತ್ರ, ಮುಂದಿನ ವರ್ಷದ ಅಂದಾಜು ಆಯವ್ಯಯ ಪತ್ರ ಮಂಡಿಸಿದರು.

Leave a Reply