ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸೆಪ್ಟೆಂಬರ್ 14 ರಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಸಹಭಾಗಿತ್ವದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸಾತ್ವಿಕ್, ವಿನಯ್ ಪ್ರಸಾದ್, ಆದಿತ್ಯ, ನಿತಿನ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.










