Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮಹಾಸಭೆ, ಸದಸ್ಯರಿಗೆ ಶೇ.14 ಡಿವಿಡೆಂಡ್ ಘೋಷಣೆ
    ಊರ್ಮನೆ ಸಮಾಚಾರ

    ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮಹಾಸಭೆ, ಸದಸ್ಯರಿಗೆ ಶೇ.14 ಡಿವಿಡೆಂಡ್ ಘೋಷಣೆ

    Updated:20/09/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮಹಾಸಭೆಯು ನಾವುಂದದ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಇಂದು ನಡೆಯಿತು.

    Click Here

    Call us

    Click Here

    ಮಹಾಸಭೆಯ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಮಾತನಾಡಿ, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘವು ಹಿಂದಿನ ಸಾಲಿನಲ್ಲಿ ರೂ 324.91 ಕೋಟಿಗೂ ಮಿಕ್ಕಿದ ವ್ಯವಹಾರ ನಡೆಸಿ, ರೂ. 1.55 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 14 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ. ಸಂಘವು ಹಿಂದಿನ ಸಾಲಿನಲ್ಲಿ ರೂ 66.64 ಕೋಟಿ ಠೇವಣಿ ಹೊಂದಿ, ಸದಸ್ಯರಿಗೆ ರೂ. 58.86 ಕೋಟಿ ಸಾಲ ನೀಡಿದೆ. ಅದರಲ್ಲಿ ರೂ. 10 ಕೋಟಿಗೂ ಮಿಕ್ಕಿ ಕೃಷಿ ಸಾಲವನ್ನು ಸಂಘವು ಸದಸ್ಯರಿಗೆ ನೀಡಲಾಗಿದೆ. ವಿವಿಧ ನಿಧಿಗಳಲ್ಲಿ 5.33 ಕೋಟಿ ರೂ., ಹೂಡಿಕೆಯಲ್ಲಿ 29.52ಕೋಟಿ ರೂ. ಸಂಚಯಿಸಲಾಗಿದೆ ಎಂದರು.

    ಸಂಸ್ಥೆಯ ನಿರಂತರವಾಗಿ ಪ್ರಗತಿಯ ಪಥದಲ್ಲಿದ್ದು ಸದಸ್ಯರಿಗೂ ಬಡ್ಡಿಯಲ್ಲಿ ಕಡಿತ, ಕೃಷಿ ಹಾಗೂ ಹೈನುಗಾರಿಕೆಗೆ ಸಾಲ ನೀಡಿ ಪ್ರೋತ್ಸಾಹ ನೀಡುತ್ತಾ ಬರಲಾಗುತ್ತಿದೆ. ವಿವಿಧ ಮಾಹಿತಿ ಕಾರ್ಯಕ್ರಮಗಳು, ಆರೋಗ್ಯ ಶಿಬಿರ, ವಿದ್ಯಾಭ್ಯಾಸದಲ್ಲಿ ಸಾಧನೆಗೈದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಸಂಸ್ಥೆಯ ಮೂಲಕ ಕೈಗೊಳ್ಳಲಾಗಿದೆ. ಸಂಘದ ನಿರ್ದೇಶಕರು, ಸಿಬ್ಬಂದಿಗಳು ಹಾಗೂ ಸದಸ್ಯರ ಸಹಕಾರದಿಂದ ಸಂಸ್ಥೆಯು ಉತ್ತಮ ಪ್ರಗತಿ ಸಾಧಿಸಿದ್ದು, ಪ್ರಧಾನ ಕಛೇರಿ ಸೇರಿದಂತೆ ಎಲ್ಲಾ ಶಾಖೆಗಳೂ ಸ್ವಂತ ನಿವೇಶನ, ಕಟ್ಟಡ ಹಾಗೂ ಗೋದಾಮು ಹೊಂದಿದ್ದು, ಪ್ರಧಾನ ಕಟ್ಟಡ ನವೀಕರಣ ಮಾಡಲಾಗಿದೆ ಎಂದರು.

    ಉಪಾಧ್ಯಕ್ಷ ಎಂ. ಚಂದ್ರಶೀಲ ಶೆಟ್ಟಿ, ನಿರ್ದೇಶಕರಾದ ವಾಸು ಪೂಜಾರಿ, ಭೋಜ ನಾಯ್ಕ್, ಜಗದೀಶ ಪಿ. ಪೂಜಾರಿ, ನರಸಿಂಹ ದೇವಾಡಿಗ, ರಾಮೃಷ್ಣ ಖಾರ್ವಿ, ಪ್ರಕಾಶ ದೇವಾಡಿಗ, ಎಂ. ಅಣ್ಣಪ್ಪ ಬಿಲ್ಲವ, ನಾರಾಯಣ ಶೆಟ್ಟಿ, ರಾಮ, ನಾಗಮ್ಮ, ಸರೋಜಾ ಆರ್. ಗಾಣಿಗ, ಎಂ. ವಿನಾಯಕ ರಾವ್ ಉಪಸ್ಥಿತರಿದ್ದರು.

    ಈ ಸಂದರ್ಭ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಸಂಘದ ವ್ಯಾಪ್ತಿಯ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹಧನ, ಇಂಜಿನಿಯರಿಂಗ್ ಕಲಿಯುವ ವಿದ್ಯಾರ್ಥಿಗಳಿಗೆ ಧನಸಹಾಯ ವಿತರಿಸಲಾಯಿತು.

    Click here

    Click here

    Click here

    Click Here

    Call us

    Call us

    ಸಂಘದ ಸದಸ್ಯರು ಪ್ರಾರ್ಥಿಸಿದರು. ನಿರ್ದೇಶಕ ಎಂ. ವಿನಾಯಕ ರಾವ್ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ ವರದಿ, ಆಯವ್ಯಯ ವಿವರ ನೀಡಿದರು. ಮರವಂತೆ ಶಾಖಾ ವ್ಯವಸ್ಥಾಪಕ ಸೋಮಯ್ಯ ಬಿಲ್ಲವ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    ten + 2 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.