Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸರಕಾರದ ಸೌಲಭ್ಯಗಳು ಲಿಂಗತ್ವ ಅಲ್ಪಸಂಖ್ಯಾತರಿಗೆ ತಲುಪಿಸಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಸರಕಾರದ ಸೌಲಭ್ಯಗಳು ಲಿಂಗತ್ವ ಅಲ್ಪಸಂಖ್ಯಾತರಿಗೆ ತಲುಪಿಸಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಸರಕಾರ ಲಿಂಗತ್ವ ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಅವರುಗಳಿಗೆ ಈ ಯೋಜನೆಗಳ ಬಗ್ಗೆ ಅರಿವು ಮೂಡಿಸಿ ಅವರುಗಳನ್ನು ಇದರ ಫಲಾನುಭವಿಗಳನ್ನಾಗಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೂಚನೆ ನೀಡಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಜಿಲ್ಲೆಯಲ್ಲಿ ಇರುವ ಲಿಂಗತ್ವ ಅಲ್ಪಸಂಖ್ಯಾತರು ಸರಕಾರ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಲಾಭ ಪಡೆಯುವುದರೊಂದಿಗೆ ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿಗಳಾಗಬೇಕು ಎಂದರು.

    ಲಿಂಗತ್ವ ಅಲ್ಪಸಂಖ್ಯಾತರು ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಪುನರ್ವಸತಿ ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹಧನ ನೀಡುತ್ತಿದೆ. ಸಮುದಾಯ ಆಧಾರಿತ ಸಂಸ್ಥೆಯಲ್ಲಿ ನೋಂದಣಿ ಆಗಿರುವವರು ಈ ಯೋಜನೆ ಲಾಭ ಪಡೆಯಬಹುದಾಗಿದೆ. ಪ್ರಸ್ತುತ ಸಾಲಿನಲ್ಲಿ 15 ಜನರಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಆದರೆ ಒಬ್ಬರೇ ಅರ್ಜಿ ಸಲಿಸಿದ್ದು, ಈ ಯೋಜನೆಯಡಿ ಹೆಚ್ಚು ಜನರು ಅರ್ಜಿ ಸಲ್ಲಿಸುವುದರೊಂದಿಗೆ ಇದರ ಸದುಪಯೋಗ ಪಡೆಯಬೇಕು ಎಂದರು.

    ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯನ್ನು ಲಿಂಗತ್ವ ಅಲ್ಪಸಂಖ್ಯಾತರಿಗೂ ಜಾರಿಗೊಳಿಸಲಾಗಿರುತ್ತದೆ. ರಾಷ್ಟ್ರೀಯ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿ ಪಡೆದವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಯಲ್ಲಿ ನೋಂದಾಯಿಸಿ ಇದರ ಲಾಭ ಪಡೆಯಬಹುದಾಗಿದೆ. ಜಿಲ್ಲೆಯಲ್ಲಿ ಈವರೆಗೆ  32 ಜನ ಲಿಂಗತ್ವ ಅಲ್ಪ ಸಂಖ್ಯಾತರು ಈ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ ಎಂದರು.

    Click here

    Click here

    Click here

    Click Here

    Call us

    Call us

    ಸರಕಾರದ ಯಾವುದೇ ಸೌಲಭ್ಯ ಪಡೆಯಲು ಅನುಕೂಲವಾಗುವಂತೆ ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುತಿನ ಚೀಟಿಯನ್ನು ನೀಡಲಾಗುತ್ತಿದೆ. ಇದಕ್ಕಾಗಿ ಸರಕಾರ ನ್ಯಾಷನಲ್ ಪೋರ್ಟಲ್ ಫಾರ್ ಟ್ರಾನ್ಸ್ಜೆಂಡರ್ ಪರ್ಸನ್ಸ್ ಪೋರ್ಟ್ಲ್‌ನ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಲ್ಲಿ ನಿಯಮಾನುಸಾರ ಗುರುತಿನ ಚೀಟಿ ನೀಡಲಾಗುವುದು ಎಂದರು.

    ಲಿಂಗತ್ವ ಅಲ್ಪಸಂಖ್ಯಾತರು ಸರಕಾರಿ ಕಚೇರಿಗಳಿಗೆ ತಮ್ಮ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಲು ಬಂದಾಗ ಅವರೊಂದಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು. ಜೊತೆಗೆ ಅವರ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು ಎಂದ ಅವರು ಸಮಾಜವು ಅವರೊಂದಿಗೆ ತಾರತಮ್ಯ ಮಾಡದೆ ಮಾನವೀಯ ನೆಲೆಯಲ್ಲಿ ಸಹಕಾರಿಸಬೇಕು ಎಂದರು. 

    ನಿವೇಶನ ಲಭ್ಯವಿರುವ ಅಲ್ಪಸಂಖ್ಯಾತರ ಗೃಹ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಿದ್ದಲ್ಲಿ ಅಗತ್ಯ ಆರ್ಥಿಕ ನೆರವು ಕಲ್ಪಿಸಲಾಗುವುದು ಎಂದ ಅವರು, ನಿವೇಶನ ರಹಿತರುಗಳು ಇದ್ದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ನಿವೇಶನ ಕೋರಿ ಅರ್ಜಿ ಸಲ್ಲಿಸಿದ್ದಲ್ಲಿ ಲಭ್ಯತೆಯ ಆದ್ಯತೆಯ ಮೇಲೆ ನಿವೇಶನ ಮಂಜೂರು ಮಾಡಲಾಗುವುದು ಎಂದರು.

    ಅಲ್ಪ ಸಂಖ್ಯಾತರು ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಇದಕ್ಕಾಗಿ ಸರಕಾರದ ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕರೆದಾಗ ಅವುಗಳಲ್ಲಿ ಭಾಗವಹಿಸಬೇಕು ಎಂದ ಅವರು ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ನಿಯಮಾನುಸಾರ ಸರಳವಾಗಿ ನೀಡುವಂತೆ ತಹಶೀಲ್ದಾರ್‌ಗಳಿಗೆ ಸೂಚನೆ ನೀಡಲಾಗುವುದು ಎಂದರು.

    ಶಾಲಾ ಹಂತಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಮಕ್ಕಳಿಗೆ ತಾರತಮ್ಯ ಮಾಡುವುದು ಕಂಡುಬರುತ್ತಿದೆ. ಶಾಲಾ ಶಿಕ್ಷಕರು ವಿದ್ಯಾರ್ಥಿ ಹಂತದಲ್ಲಿಯೇ ಈ ಬಗ್ಗೆ ಅರಿವು ಮೂಡಿಸುವುದು ಸೂಕ್ತ. ಸರಕಾರಿ ಉದ್ಯೋಗಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಮೀಸಲಿಡಬೇಕು. ಸಮಾಜದಲ್ಲಿ ನಮ್ಮನ್ನು ನೋಡುವ ರೀತಿಯಲ್ಲಿ ಬದಲಾವಣೆ ಆಗಬೇಕು ಸೇರಿದಂತೆ ಮತ್ತಿತರ ಬೇಡಿಕೆಗಳನ್ನು ಲಿಂಗತ್ವ ಅಲ್ಪಸಂಖ್ಯಾತರು ಸಭೆಯಲ್ಲಿ ಸಲ್ಲಿಸಿದರು.

    ಸಭೆಯಲ್ಲಿ ಎಎಸ್ಪಿ ಟಿ. ಸಿದ್ಧಲಿಂಗಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಪೌರಾಯುಕ್ತ ರಾಯಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧ ಹಾದಿಮನಿ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    four × 3 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.