ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲೆಯಲ್ಲಿ ತೃತೀಯ ಭಾಷೆಯಾಗಿ ಕೊಂಕಣಿಯನ್ನು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿಶ್ವ ಕೊಂಕಣಿ ಕೇಂದ್ರ ಮಂಗಳೂರು ಇದರ ವತಿಯಿಂದ ಸ್ಕೂಲ್ ಬ್ಯಾಗ್ ಮತ್ತು ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.
ಶಾಲೆಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಕೊಂಕಣಿ ಸಾಂಸ್ಕೃತಿಕ ಸಂಘದ ಮುಖ್ಯಸ್ಥ ಎಂ. ಆರ್. ಕಾಮತ್ ಮತ್ತು ಉಷಾ ಪೈ ಹಾಗೂ ಕೊಡಿಯಾಲ್ ಕಬರ್ ಪತ್ರಿಕೆ ಮುಖ್ಯಸ್ಥ ವೆಂಕಟೇಶ ಬಾಳಿಗ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಮತ್ತು ವಿದ್ಯಾರ್ಥಿವೇತನ ವಿತರಿಸಿ ಶುಭ ಹಾರೈಸಿದರು.
ಜಿ.ಎಸ್.ವಿ.ಎಸ್ ಅಸೋಸಿಯೇನ್ ಕಾರ್ಯದರ್ಶಿ ಎಚ್.ಗಣೇಶ್ ಕಾಮತ್, ಶಾಲೆಯ ಸಂಚಾಲಕ ಎನ್.ಸದಾಶಿವ ನಾಯಕ್, ಎಸ್.ವಿ. ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಗೋಪಾಲ ದೇವಾಡಿಗ, ಎಸ್.ವಿ.ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್ ಉಪಸ್ಥಿತರಿದ್ದರು.
ಕೊಂಕಣಿ ಶಿಕ್ಷಕಿಯರಾದ ರೇಷ್ಮಾ ನಾಯಕ್ ಮತ್ತು ನಮಿತಾ ಶೆಣೈ ಕಾರ್ಯಕ್ರಮ ನಿರ್ವಹಿಸಿದರು.