ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಹಕಾರ ತತ್ವದ ಮೂಲ ಆಶಯಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಕಾರ್ಯನಿರ್ವಹಿಸಿ, ರೈತಾಪಿ ವರ್ಗದ ಹಾಗೂ ಗ್ರಾಹಕರ ಸೇವೆಯಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು ಕಳೆದ ಆರ್ಥಿಕ ವರ್ಷದಲ್ಲಿ ಎಲ್ಲಾ ವ್ಯವಹಾರಗಳಲ್ಲೂ ಗುರಿ ಮೀರಿ ಸಾಧನೆ ಮಾಡಿ, ವರದಿ ವರ್ಷದಲ್ಲಿ 6.01 ಕೋಟಿ ರೂ. ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು.
ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಭಾನುವಾರ ನಡೆದ ಸಂಘದ ವಾರ್ಷಿಕ ಸರ್ವದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವರದಿ ವರ್ಷದಲ್ಲಿ 1030 ಕೋಟಿ ರೂ. ಗೂ ಮಿಕ್ಕಿ ವ್ಯವಹಾರ ನಡೆಸಿ, ಸಂಘದ ನಾಲ್ಕು ಶಾಖೆಗಳ ಮೂಲಕ 238.08ಕೋಟಿ ರೂ. ಠೇವಣೆ ಸಂಗ್ರಹಿಸಿ, 200.22 ಕೋಟಿ ರೂ. ಸಾಲ ನೀಡಿದೆ, 77.18 ಕೋಟಿ ರೂ. ಹೂಡಿಕೆ ಮಾಡಿ, 32.05ಕೋಟಿ ರೂ. ನಿಧಿಗಳನ್ನು ಹೊಂದಿ ಸದೃಢವಾಗಿದೆ. 8400 ಸದಸ್ಯರನ್ನೊಳಗೊಂಡ 756 ರೈತಸಿರಿ ಸ್ವಸಹಾಯ ಗುಂಪುಗಳನ್ನು ಸಂಯೋಜಿಸಿ, ಆ ಗುಂಪುಗಳಿಗೆ ಸಾಲಸೌಲಭ್ಯ ನೀಡಲಾಗಿದೆ. ಸಂಘದ ಸದಸ್ಯರಿಗೆ ಶೇ. 9.75ಸರಳ ಬಡ್ಡಿದರಲ್ಲಿ ಗೃಹಸಾಲ ಸಾಲ ನೀಡಲಾಗುತ್ತಿದೆ ಎಂದರು.
ರಾಜ್ಯದ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿಯೇ ಮೊದಲ ಬಾರಿಗೆ ಸಂಘದ ಮಾಲಕತ್ವದಲ್ಲಿ ವಿಶಿಷ್ಠ ವಿನ್ಯಾಸದ ಸರ್ವ ಸರಕಿನ ರೈತಸಿರಿ ಅಗ್ರಿ ಮೋಲ್‌ನ ಕಟ್ಟಡ ಕಾಮಗಾರಿಗಾಗಿ ಇ-ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ, ಶೀಘ್ರ ಕಾಮಗಾರಿ ಆರಂಭಿಸಿ, ಗ್ರಾಹಕರಿಗೆ ಹೊಸತನದ ಸೇವೆ ಕಲ್ಪಿಸುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಪ್ರಸ್ತುತ ವರ್ಷದಲ್ಲಿ ನಾಗೂರು ಶಾಖೆಗೆ ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ನಾಗೂರಿನಲ್ಲಿ 0.12 ಏಕ್ರೆ ನಿವೇಶನವನ್ನು ಖರೀದಿಸಲು ಚಿಂತನೆ ನಡೆಸಲಾಗಿದೆ. ಸಂಘದ ಲಾಭಾಂಶದಲ್ಲಿ ಸಂಘದ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಗೌರವ ಶಿಕ್ಷಕರಿಗೆ ಗೌರವಧನ, ಮೂಲಭೂತ ಸೌಕರ್ಯಗಳ ಬೇಡಿಕೆಯಂತೆ ಸಹಾಯಧನ ನೀಡುವುದಲ್ಲದೇ, ಕ್ರೀಡೆ, ಸಾಂಸ್ಕೃತಿಕ ಹಾಗೂ ಧಾರ್ಮಿಕ ನೆಲೆಯಲ್ಲಿ ಜರಗುವ ಕಾರ್ಯಕ್ರಮಗಳಿಗೆ ನಿರಂತರವಾಗಿ ಸಹಾಯ ನೀಡಲಾಗುತ್ತಿದೆ ಎಂದರು.
ಸಂಘದ ಉಪಾಧ್ಯಕ್ಷ ಈಶ್ವರ ಹಕ್ಲತೋಡ್, ನಿರ್ದೇಶಕರಾದ ಬಿ. ರಘುರಾಮ ಶೆಟ್ಟಿ, ಮೋಹನ ಪೂಜಾರಿ, ಬಿ.ಎಸ್. ಸುರೇಶ ಶೆಟ್ಟಿ, ಗುರುರಾಜ್ ಹೆಬ್ಬಾರ್, ವೀರೇಂದ್ರ ಶೆಟ್ಟಿ, ಮಂಜು ದೇವಾಡಿಗ, ನಾಗರಾಜ ಖಾರ್ವಿ, ಭರತ್ ದೇವಾಡಿಗ, ಹೂವ ನಾಯ್ಕ, ದಿನೀತಾ ಶೆಟ್ಟಿ, ಜಲಜಾಕ್ಷಿ ಪೂಜಾರಿ ಉಪಸ್ಥಿತರಿದ್ದರು. ಈ ಸಂದರ್ಭ ಸಂಘದ ಹಿರಿಯ ಸದಸ್ಯರನ್ನು ಸನ್ಮಾನಿಸಲಾಯಿತು.
ಮುಖ್ಯ ಕಾರ್ಯನಿರ್ವಹಣಾಕಾರಿ ವಿಷ್ಣು ಆರ್. ಪೈ ವಾರ್ಷಿಕ ವರದಿ ಮಂಡಿಸಿದರು, ಹಿರಿಯ ವ್ಯವಸ್ಥಾಪಕ ಚಂದ್ರಯ್ಯ ಶೆಟ್ಟಿ ವಂದಿಸಿದರು.
ಫೋಟೋಫೈಲ್ ೨೨ಆರ್‌ಖಂಬದಕೋಣೆ – ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ವಾರ್ಷಿಕ ಸರ್ವದಸ್ಯರ ಸಾಮಾನ್ಯ ಸಭೆಯಲ್ಲಿ ಸಂಘದ ಹಿರಿಯ ಸದಸ್ಯರನ್ನು ಸನ್ಮಾನಿಸಲಾಯಿತು.
ವಿ.ಸೂ: ಸರ್, ಪ್ರಮುಖ ಜಾಹೀರಾತು ಪಾರ್ಟಿ, ದಯವಿಟ್ಟು ಪ್ರಕಟಿಸಿ.