ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ ಕೇಂದ್ರ ಸಶಸ್ತ್ರ ಪೋಲೀಸ್ ಮತ್ತು ಎಸ್‌ಎಸ್ ಈ ಪಡೆಗಳಲ್ಲಿ ಕಾನ್‌ಸ್ಟೇಬಲ್ ಮತ್ತು ಅಸ್ಸಾಂ ರೈಫಲ್ ಮ್ಯಾನ್ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತಿದ್ದು, ಮಾನ್ಯತೆ ಪಡೆದ ಮಂಡಳಿಯಿಂದ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ www.ssckkr.kar.nic.in ಮತ್ತು https://ssc.gov.in ಪೋರ್ಟಲ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆನ್‌ಲೈನ್ ಮೂಲಕ ನೊಂದಣಿಗೆ ಅಕ್ಟೋಬರ್ 14 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.