Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸ್ಥಳೀಯ ಭಾಷೆಯಲ್ಲಿಯೇ ಬ್ಯಾಂಕಿಂಗ್ ವ್ಯವಹಾರ ಮಾಡಿ: ಜಿ.ಪಂ ಸಿ.ಇ.ಓ ಪ್ರತೀಕ್ ಬಾಯಲ್
    ಉಡುಪಿ ಜಿಲ್ಲೆ

    ಸ್ಥಳೀಯ ಭಾಷೆಯಲ್ಲಿಯೇ ಬ್ಯಾಂಕಿಂಗ್ ವ್ಯವಹಾರ ಮಾಡಿ: ಜಿ.ಪಂ ಸಿ.ಇ.ಓ ಪ್ರತೀಕ್ ಬಾಯಲ್

    Updated:26/09/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಬ್ಯಾಂಕ್‌ಗಳ ಮ್ಯಾನೆಜರ್‌ಗಳು ಹಾಗೂ ಸಿಬ್ಬಂದಿಗಳು ಜನಸಾಮಾನ್ಯರೊಂದಿಗೆ ಬ್ಯಾಂಕಿನ ವ್ಯವಹಾರಗಳ ಕುರಿತು ಸ್ಥಳೀಯ ಪ್ರಾದೇಶಿಕ ಕನ್ನಡ ಭಾಷೆಯಲ್ಲಿ ವ್ಯವಹರಿಸುವುದರಿಂದ ಬ್ಯಾಂಕಿನ ವ್ಯವಹಾರಗಳು ಮತ್ತಷ್ಟು ಅಭಿವೃದ್ಧಿಗೊಳ್ಳಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ತಿಳಿಸಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ರಾಷ್ಟ್ರೀಕೃತ ಬ್ಯಾಂಕುಗಳ ಹೆಸರು ಹಾಗೂ ಸ್ಥಳಗಳನ್ನು ಬ್ಯಾಂಕುಗಳ ಬೋರ್ಡುಗಳಲ್ಲಿ ಪ್ರಾದೇಶಿಕ ಭಾಷೆಯಲ್ಲಿ ಅಳವಡಿಸಬೇಕು. ಗ್ರಾಹಕರೊಂದಿಗೆ ಸಂವಹನ ಮಾಡಲು ಅನುಕೂಲವಾಗುವಂತೆ ಸ್ಥಳೀಯ ವ್ಯಕ್ತಿಗಳನ್ನು ನೇಮಿಸುವಂತೆ ತಿಳಿಸಿದರು.

    ಸಾರ್ವಜನಿಕರ ಜೀವನಮಟ್ಟವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳು ಜಾರಿಯಲ್ಲಿವೆ. ಈ ಕುರಿತು ಬ್ಯಾಂಕ್ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಜನಸಾಮಾನ್ಯರಿಗೆ ವ್ಯವಹಾರ ಚಟುವಟಿಕೆಗಳ ಕುರಿತು ಅರಿವು ಮೂಡಿಸುವ ಮೂಲಕ ಹೆಚ್ಚಿನ ಸಂಖ್ಯೆಯ ಜನರನ್ನು ಯೋಜನೆಯ ಫಲಾನುಭವಿಗಳನ್ನಾಗಿಸಲು ಕ್ರಮ ವಹಿಸಬೇಕು ಎಂದರು.

    ಜಿಲ್ಲೆಯ ಬ್ಯಾಂಕ್‌ಗಳಲ್ಲಿ ಕಳೆದ ಸಾಲಿನಲ್ಲಿ 52,676 ಕೋಟಿ ರೂ. ವ್ಯವಹಾರ ನಡೆದಿದ್ದು, ಪ್ರಸಕ್ತ ಸಾಲಿನಲ್ಲಿ 58,352 ಕೋಟಿ ರೂ ವ್ಯವಹಾರ ನಡೆದು, 5676 ಕೋಟಿ ರೂ. ಹೆಚ್ಚಾಗಿ ಶೇ.10.78 ರಷ್ಟು ಬೆಳೆವಣಿಗೆಯಾಗಿದೆ. ಆರ್ಥಿಕತೆಯಲ್ಲಿ ಉಡುಪಿ ಜಿಲ್ಲೆಯು ರಾಜ್ಯಕ್ಕೆ ಮಾದರಿಯಾಗಲು ಅಧಿಕಾರಿಗಳು ತಂಡವಾಗಿ ಕಾರ್ಯನಿರ್ವಹಿಸಬೇಕು ಎಂದರು.

    Click here

    Click here

    Click here

    Call us

    Call us

    ಜಿಲ್ಲೆಯಲ್ಲಿ ಆದ್ಯತಾ ವಲಯಗಳಿಗೆ 2703.09 ಕೋಟಿ ರೂ., ಸಾಲ ವಿತರಣೆ ಮಾಡಿ ಶೇ. 30.74 ಹಾಗೂ ಆದ್ಯತೇತರ ವಲಯಗಳಿಗೆ 1677.82 ಕೋಟಿ ರೂ. ಸಾಲ ವಿತರಣೆ ಮಾಡಿ, ಶೇ. 43.65 ರಷ್ಟು ಸಾಧನೆ ಮಾಡಲಾಗಿದೆ ಎಂದರು.

    ಕೆನರಾ ಬ್ಯಾಂಕ್‌ನ ರೀಜನಲ್ ಮ್ಯಾನೆಜರ್ ಶೀಬ ಸಹಜನ್ ಮಾತನಾಡಿ, ಕಳೆದ ವರ್ಷಕ್ಕೆ ಹೋಲಿಸಿದ್ದಲ್ಲಿ ಬ್ಯಾಂಕಿಂಗ್ ಠೇವಣಿ ಅನುಪಾತವು ಶೇ.46.94 ಇದ್ದು, ಪ್ರಸಕ್ತ ಸಾಲಿನಲ್ಲಿ ಶೇ.46.92 ರಷ್ಟು ಕಡಿಮೆಯಾಗಿ 0.02 ರಷ್ಟು ಹಿನ್ನಡೆಯಾಗಿದೆ. ಸಿ.ಡಿ ಅನುಪಾತದಲ್ಲಿ ಜಿಲ್ಲೆಯು ಶೇ. 50 ಕ್ಕಿಂತ ಕಡಿಮೆ ಇರುವುದು ಅತ್ಯಂತ ಕಳವಳಕಾರಿಯಾದ ವಿಷಯವಾಗಿದ್ದು, ಇದನ್ನು ಹೆಚ್ಚಿಸಲು ಮುಂದಿನ ದಿನಗಳಲ್ಲಿ ಎಲ್ಲಾ ಬ್ಯಾಂರ‍್ಸ್ಗಳು ಕಾರ್ಯಪ್ರವೃತ್ತರಾಗಬೇಕು ಎಂದರು.

    ಸಭೆಯಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್ ಜಿ, ಆರ್.ಬಿ.ಐ ನ ಎಕ್ಸಿಕ್ಯುಟಿವ್ ಇಳಾ ಸಾಹು, ನಬಾರ್ಡ್ನ ಡಿ.ಡಿ.ಎಂ ಸಂಗೀತಾ ಕಾರ್ಥಾ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್‌ನ ಅಸಿಸ್ಟೆಂಟ್ ಜನರಲ್ ಮ್ಯಾನೆಜರ್ ರಾಜೇಶ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜನಸಾಮಾನ್ಯರಿಗೆ ಸರಕಾರದ ಸೇವೆ, ಸವಲತ್ತುಗಳನ್ನು ಸಕಾಲದಲ್ಲಿ ತಲುಪಿಸಿ: ಶಾಸಕ ಗಂಟಿಹೊಳೆ

    05/10/2026

    ಉಡುಪಿ ಎಂ.ಜಿ.ಎಂ ಸಂಧ್ಯಾ ಕಾಲೇಜಿನಲ್ಲಿ ‘ವಾಕ್ – ಸ್ಟೆಪ್ ಬೈ ಸ್ಟೆಪ್ – ಪ್ರೇರಣಾದಾಯಕ ಕಾರ್ಯಕ್ರಮ

    01/10/2026

    ಎಂಜಿಎಂ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮ ಮಂಡಳಿಯ ಪದಗ್ರಹಣ

    30/09/2026
    Leave A Reply Cancel Reply

    five × four =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಸೈಬರ್‌ ಅಪರಾಧ – ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ
    • ಡಾ. ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ವಿವಿಧ ಸ್ಪರ್ಧೆಗಳ ಉದ್ಘಾಟನೆ
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ
    • ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆ ವತಿಯಿಂದ ಮಹಿಳಾ ಟೈಲರಿಂಗ್ ತರಬೇತಿಯ ಸಮಾರೋಪ
    • ಕ್ಲೋಕೇಟ್‌ ಟೆಕ್ನಾಲಜೀಸ್ ನೂತನ ಕಚೇರಿಯ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.