ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಮತ್ತು ಎಸ್.ಎನ್.ವಿ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕಾಲೇಜು ವಿಭಾಗದ ಬಾಲಕ-ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಕುಂದಾಪುರದ ವಿದ್ಯಾರ್ಥಿನಿ ನವಮಿ ಎಸ್ ಶೆಟ್ಟಿ ವಿಜಯಶಾಲಿಯಾಗುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ ಮತ್ತು ಆಶಿತ್ ಶೆಟ್ಟಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾನೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.