ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಲು, ಮೂಲಭೂತ ಸೌಕರ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಅನಿರ್ದಿಷ್ಠಾವಧಿ ಪ್ರತಿಭಟನೆಯ ಭಾಗವಾಗಿ ಗುರುವಾರ ಕುಂದಾಪುರ ತಾಲೂಕು ಕಚೇರಿ ಮುಂಭಾಗ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಪ್ರತಿಭಟನೆ ನಡೆಸಿದರು.
ಕಂದಾಯ ಇಲಾಖೆಯಿಂದ ನಿರಂತರವಾಗಿ ಸರ್ಕಾರದಿಂದ ಅಭಿವೃದ್ದಿಪಡಿಸಿರುವ ಹಕ್ಕುಪತ್ರ, ಆಧಾರ್ ಸೀಡ್, ಬೆಳೆ ಕಟಾವು ಮೊಬೈಲ್ ಆಪ್, ಭೂಮಿ, ದಿಶಾಂಕ್ ಸೇರಿದಂತೆ ಸುಮಾರು 21 ಎಲ್ಲಾ ವೆಬ್/ಮೊಬೈಲ್ ತಂತ್ರಾಂಶಗಳ ಮೂಲಕ ಹಾಗೂ ಸಿ-ವೃಂದದ ನೌಕರರ ಹತ್ತು ಪಟ್ಟು ಕೆಲಸಗಳನ್ನು ನಿರ್ವಹಿಸುತ್ತಿದ್ದು, ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳ ವೇತನ ಶ್ರೇಣಿ ನೀಡಬೇಕು.
► ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಠಾವಧಿ ಪ್ರತಿಭಟನೆ- https://kundapraa.com/?p=77240 .
ಕಛೇರಿ, ಪೋನ್, ಕಂಪ್ಯೂಟರ್ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು, ಸೇವಾ ವಿಷಯಗಳಿಗೆ ಸಂಬಂಧಿಸಿ ಸೌಲಭ್ಯಗಳನ್ನು ಕಲ್ಪಿಸಬೇಕು, ತಂತ್ರಾಂಶಗಳಿಗೆ ಸಂಬಂಧಿಸಿದ ಎಲ್ಲಾ ಅಮಾನತ್ತುಗಳನ್ನು ತಕ್ಷಣವೇ ರದ್ದುಪಡಿಸಿ ಹಿಂಪಡೆಯಬೇಕು, ಸರ್ಕಾರಿ ರಜಾ ದಿನಗಳಲ್ಲಿ ಕರ್ತವ್ಯಕ್ಕೆ ಮೆಮೋ ಹಾಕಬಾರದು, ಸೇರಿದಂತೆ ಹಲವಾರು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳು ಪ್ರತಿಭಟನೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ದಿವಾಕರ ಶೆಟ್ಟಿ, ನಿವೃತ್ತ ನೌಕರರ ಜಿಲ್ಲಾದ್ಯಕ್ಷರಾದ ಪ್ರಕಾಶ್ ಚಂದ್ರಶೆಟ್ಟಿ, ಗ್ರಾಮ ಆಡಳಿತ ಅಧಿಕಾರಿ ಸಂಘದ ತಾಲೂಕು ಅದ್ಯಕ್ಷ ಶಿವರಾಯ, ಪ್ರಧಾನ ಕಾರ್ಯದರ್ಶಿ ವಿಘ್ನೇಶ್ ಉಪಾಧ್ಯ, ಉಪಾದ್ಯಕ್ಷ ಆನಂದಕುಮಾರ ಒ. ಖಜಾಂಚಿ ಸೋಮಪ್ಪ ಹೆಬ್ಬಾಳ. ರಾಜ್ಯ ಪರಿಷತ್ ಸದಸ್ಯ ಆನಂದ್ ಮುಕ್ಕಣ್ಣ , ಮಹಿಳಾ ಕಾರ್ಯದರ್ಶಿ ಹೇಮಾ ಹಾಗೂ ಹಾಗೂ ಕುಂದಾಪುರ ತಾಲೂಕಿನ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು. ಸರ್ಕಾರಿ ಕಂದಾಯ ನೌಕರರ ಸಂಘದ ಅಧ್ಯಕ್ಷ ರಾಘವೇಂದ್ರ ಬಾಹ್ಯ ಬೆಂಬಲ ನೀಡಿದರು.