Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ
    ಉಡುಪಿ ಜಿಲ್ಲೆ

    ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟುವುದರ ಮೂಲಕ ರೇಬಿಸ್ ರೋಗ ನಿಯಂತ್ರಣಕ್ಕೆ ಸ್ಥಳೀಯ ಸಂಸ್ಥೆಯವರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿ ಸಂತಾನ ನಿಯಂತ್ರಣ, ಅನುಷ್ಠಾನ ಮೇಲ್ವಿಚಾರಣೆ ಸಮಿತಿ ರಚನೆ ಮತ್ತು ಸ್ಥಳೀಯ ಮಟ್ಟದ ಸಮಿತಿ ರಚನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

    ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ನಾಯಿ ಕಡಿತದ ಪ್ರಕರಣಗಳಿಗೆ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ಸಮುದಾಯ ಆರೊಗ್ಯ ಕೇಂದ್ರಗಳಲ್ಲಿ, ತಾಲೂಕು ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿ ಪೂರ್ಣ ಪ್ರಮಾಣದ ಲಸಿಕೆಗಳು ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದರು.

    ಜಿಲ್ಲೆಯಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸೆ ಅಡಿಯಲ್ಲಿ ಪುರಸಭೆ, ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್‌ನಲ್ಲಿ 3007 ನಾಯಿಗಳಿಗೆ, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ 447 ನಾಯಿಗಳು ಸೇರಿದಂತೆ ಒಟ್ಟಾರೆ 3454 ನಾಯಿಗಳಿಗೆ ಶಸ್ತçಚಿಕಿತ್ಸೆ ಮಾಡಲಾಗಿದೆ ಎಂದರು.

    ಪ್ರಸ್ತುತ ಸಾಲಿನಲ್ಲಿ ಏಪ್ರಿಲ್ ನಿಂದ ಈವರೆಗೆ ಪಟ್ಟಣ ಪಂಚಾಯತ್, ಪುರಸಭೆ ಹಾಗೂ ಗ್ರಾಮ ಪಂಚಾಯತ್ ನಲ್ಲಿ 320, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ 797 ಸೇರಿದಂತೆ ಒಟ್ಟು 1,117 ನಾಯಿಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂದರು.

    Click here

    Click here

    Click here

    Click Here

    Call us

    Call us

    ತಾಲೂಕು ಮಟ್ಟದ ಹಾಗೂ ಸ್ಥಳೀಯ ಸಂಸ್ಥೆಯ ಮಟ್ಟದಲ್ಲಿ ಬೀದಿ ನಾಯಿ ಸಂತಾನ ನಿಯಂತ್ರಣ ಹಾಗೂ ಹುಚ್ಚು ನಾಯಿ ನಿಯಂತ್ರಣಕ್ಕಾಗಿ ಆಗಿಂದಾಗೆ ಸಭೆ ನಡೆಸಿ ಅವುಗಳ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಸೂಚನೆ ನೀಡಿದರು.

    ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯಲ್ಲಿ ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಅನುಷ್ಟಾನಗೊಂಡಿದೆ. 2024 ನೇ ಸಾಲಿನಿಂದ ಈವರೆಗೆ ಒಟ್ಟು 9,307 ನಾಯಿ ಕಡಿತದ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ತಾಲೂಕು ಆಸ್ಪತ್ರೆಗಳಲ್ಲಿ ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿ ಲಸಿಕೆಗಳು ಲಭ್ಯವಿದ್ದು, ಎಲ್ಲ ಪ್ರಕರಣಗಳಿಗೂ ಲಸಿಕೆಯನ್ನು ನೀಡಲಾಗಿದೆ ಎಂದರು.

    ಸ್ಥಳೀಯ ಸಂಸ್ಥೆಗಳು ಪ್ರತಿ ವರ್ಷವೂ ತಮ್ಮ ವ್ಯಾಪ್ತಿಯ ಪ್ರದೇಶದ ಬೀದಿ ನಾಯಿ ಸಂತಾನ ನಿಯಂತ್ರಣಕ್ಕೆ ಅವಶ್ಯವಿರುವ ಅನುದಾನವನ್ನು ಆಯವ್ಯಯದಲ್ಲಿ ಮೀಸಲಿರಿಸಿ ಅವುಗಳ ನಿಯಂತ್ರಣಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂದರು.

    ಜಿಲ್ಲೆಯ ಎ.ಬಿ.ಸಿ ಕೇಂದ್ರದಲ್ಲಿ ಪ್ರತಿಯೊಬ್ಬರು ತಿಂಗಳು 600 ಬೀದಿ ನಾಯಿಗಳ ಶಸ್ತ್ರಚಿಕಿತ್ಸೆ ನಿರಂತರವಾಗಿ ನಡೆಯುವಂತೆ ಕಾರ್ಯಕ್ರಮ ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ಸೂಚನೆ ನೀಡಿದ ಅವರು, ಪ್ರಥಮ ಹಂತದಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳೊಂದಿಗೆ ಜಿಲ್ಲಾ ಕೇಂದ್ರದಲ್ಲಿ ಎ.ಬಿ.ಸಿ ಕೇಂದ್ರಗಳನ್ನು ಸ್ಥಾಪಿಸಬೇಕು ಅಲ್ಲಿ ಅವಶ್ಯ ಸೌಲಭ್ಯಗಳು ಇರುವಂತೆ ಕ್ರಮ ವಹಿಸಬೇಕು ಎಂದರು.

    ಸಭೆಯಲ್ಲಿ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಎಂ.ಸಿ ರೆಡ್ಡಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್, ನಗರಸಭೆ ಪರಿಸರ ಅಭಿಯಂತರರಾದ ಸ್ನೇಹ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    seventeen − 3 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.