ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಆಳ್ವಾಸ್ ಕಾಲೇಜಿಗೆ ಪ್ರಶಸ್ತಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ:
ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 26ರಂದು ನಡೆದ ದಕ್ಷಿಣ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಮೂಡುಬಿದಿರೆ ತಾಲ್ಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜು ತಂಡವು ಸಮಗ್ರ ಪ್ರಶಸ್ತಿಗೆ ಭಾಜನವಾಗಿದೆ.

Call us

Click Here

ಪುರುಷ ಮತ್ತು ಮಹಿಳಾ ಸೇರಿದಂತೆ ಎರಡೂ ವಿಭಾಗಗಳ ಅಥ್ಲೆಟಿಕ್ಸ್‌ನಲ್ಲಿ ಒಟ್ಟು  23 ಚಿನ್ನ, 10 ಬೆಳ್ಳಿ, 02ಕಂಚಿನ ಪದಕಗಳೊಂದಿಗೆ ಒಟ್ಟು 35 ಪದಕ, ಕುಸ್ತಿಯಲ್ಲಿ 16 ಚಿನ್ನ, 08 ಬೆಳ್ಳಿ, 08 ಕಂಚಿನ ಪದಕಗಳೊಂದಿಗೆ ಒಟ್ಟು 32 ಪದಕ, ಯೋಗದಲ್ಲಿ 05 ಚಿನ್ನ, 04 ಬೆಳ್ಳಿ, 02 ಕಂಚಿನ ಪದಕಗಳೊಂದಿಗೆ ಒಟ್ಟು 11 ಪದಕ ಹಾಗೂ ಕಬಡ್ಡಿ, ಬಾಲ್ ಬ್ಯಾಡ್ಮಿಂಟನ್ ಮತ್ತು ಖೋ-ಖೋ ಪಂದ್ಯಾಟಗಳ ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ಪ್ರಥಮ ಸ್ಥಾನ ಹಾಗೂ ವಾಲಿವಾಲ್ ಪುರುಷರ ವಿಭಾಗದಲ್ಲಿ ದ್ವಿತೀಯ, ತ್ರೋಬಾಲ್ ಮಹಿಳೆಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಆಳ್ವಾಸ್ ಪಡೆದುಕೊಂಡಿದೆ.

ಮಂಗಳೂರು, ಉಡುಪಿ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಳ್ವಾಸ್ ಕಾಲೇಜಿನ 120 ಕ್ರೀಡಾಪಟುಗಳು ಆಯ್ಕೆಯಾಗಿರುತ್ತಾರೆ.

ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ  ಅಭಿನಂದಿಸಿದ್ದಾರೆ.

Leave a Reply