ಕೇಂದ್ರ ಭೂಸಾರಿಗೆ ಮಂತ್ರಾಲಯದ ಅಧಿಕಾರಿಗಳೊಂದಿಗೆ ಲೋಕಸಭಾ ಸಂಸದರ ಮಹತ್ವದ ಸಭೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕೇಂದ್ರ ಭೂಸಾರಿಗೆ ಮಂತ್ರಾಲಯದ ಡೈರೆಕ್ಟರ್ ಜನರಲ್ ದರ್ಮೇಂದ್ರ ಸಾರಂಗಿ ಅವರು ಶುಕ್ರವಾರದಂದು ಶಿವಮೊಗ್ಗ ಜಿಲ್ಲೆಯ ರಾಷ್ಠ್ರೀಯ ಹೆದ್ದಾರಿ ಕಾಮಗಾರಿಗಳ ಪರಿವೀಕ್ಷಣೆಗೆ ಭೇಟಿ ನೀಡಿದ ಸಮಯದಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ ಅವರು ನಗರದ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳನ್ನು ಕ್ಷೇತ್ರದ ಜನತೆಯ ಪರವಾಗಿ ಸ್ವಾಗತಿಸಿ, ಅಧಿಕಾರಿಗಳೊಂದಿಗೆ ಸಭೆ ನೆಡೆಸಿ ಕ್ಷೇತ್ರದಲ್ಲಿ ಅಭಿವೃದ್ದಿಯಾಗುತ್ತಿರುವ ಹಾಗೂ ಆಗಬೇಕಾದ ಪ್ರಮುಖ ಕಾಮಗಾರಿಗಳ ಬಗ್ಗೆ ವಿಸ್ತಾರವಾಗಿ ಚರ್ಚಿಸಿದರು.

Call us

Click Here

ಈ ಸಂದರ್ಭದಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳಾದ ಸಿಗಂದೂರು ಸೇತುವೆ, ಚಿತ್ರದುರ್ಗ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ರಸ್ತೆ ಹಾಗೂ ಸಾಗರ ಪಟ್ಟಣದ ಚತುಷ್ಪಥ ರಸ್ತೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಬಗ್ಗೆ ಚರ್ಚಿಸಿದರು. ಟೆಂಡರ್ ಪ್ರಕ್ರಿಯೆ ಮುಗಿದಿರುವ ಕಾಮಗಾರಿಗಳಾದ ಶಿವಮೊಗ್ಗ-ಆನಂದಪುರ 4 ಪಥದ ರಸ್ತೆ, ನೆಲ್ಲಿಸರದಿಂದ-ತೀರ್ಥಹಳ್ಳಿವರೆಗಿನ 4 ಪಥದ ರಸ್ತೆ, ಬೈಂದೂರು-ನಾಗೋಡಿವರೆಗಿನ ದ್ವಿಪಥ ರಸ್ತೆ, ಹಾಗು ಹೊಸೂರು ಮತ್ತು ತಾಳಗುಪ್ಪ ರೈಲ್ವೇ ಮೇಲ್ಸೇತುವೆ ಕಾಮಗಾರಿಗಳನ್ನು ಶೀಘ್ರ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರು.

2024-25 ನೇ ಸಾಲಿಗೆ ಮಂಜೂರಾದ ಕಾಮಗಾರಿಗಳಾದ ಆಗುಂಬೆ ರಸ್ತೆ, ಆನಂದಪುರದಿಂದ ತಾಳಗುಪ್ಪವರೆಗಿನ ರಸ್ತೆ, ಸಾಗರದಿಂದ ಮರಕುಟಕವರೆಗಿನ ರಸ್ತೆ ಹಾಗೂ ಬೈಂದೂರಿನಿಂದ ರಾಣೆಬೆನ್ನೂರುವರೆಗಿನ ಬಾಕಿ ಉಳಿದಿರುವ ರಸ್ತೆಗಳ ಡಿ.ಪಿ.ಆರ್ ಗಳಿಗೆ ಮಂಜೂರಾತಿ ಪಡೆಯುವ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ತಿಳಿಸಿದರು. ಮೇಗರವಳ್ಳಿಯಿಂದ ಸೋಮೇಶ್ವರದವರೆಗೆ ಆಗುಂಬೆ ಘಾಟಿಗೆ ಪರ್ಯಯಾವಾಗಿ 4 ಪಥದ ಟನಲ್ ರಸ್ತೆಯ ಡಿಪಿಆರ್ ತಯಾರಿಸುವ ಸಂಬಂದ ಕಾರ್ಯ ಸಾದ್ಯತೆ ವರದಿಯನ್ನು ತಯಾರಿಸಿ ಸಲ್ಲಿಸಲು ಸಹ ರಾಷ್ಠ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿರುತ್ತಾರೆ.

ಶಿವಮೊಗ್ಗ ನಗರಕ್ಕೆ ಬೇಟಿ ನೀಡಿ, ಕ್ಷೇತ್ರದ ರಾಷ್ಠ್ರೀಯ ಹೆದ್ದಾರಿ ಕಾಮಗಾರಿಗಳ ಅಭಿವೃದ್ದಿಯ ವೇಗ ಹೆಚ್ಚಿಸಲು ಎಲ್ಲಾ ಅಗತ್ಯ ಕ್ರಮವಹಿಸುವುದಾಗಿ ತಿಳಿಸಿದ ಕೇಂದ್ರ ಭೂಸಾರಿಗೆ ಮಂತ್ರಾಲಯದ ಡೈರೆಕ್ಟರ್ ಜನರಲ್ ದರ್ಮೇಂದ್ರ ಸಾರಂಗಿ ಅವರಿಗೆ ಕ್ಷೇತ್ರದ ಜನತೆಯ ಪರವಾಗಿ ಸಂಸದರು ಧನ್ಯವಾದಗಳನ್ನು ಅರ್ಪಿಸಿರುತ್ತಾರೆ. 

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಧನಂಜಯ ಸರ್ಜಿಯ ಅವರು ಕೇಂದ್ರ ಭೂಸಾರಿಗೆ ಮಂತ್ರಾಲಯದ ರೀಜನಲ್ ಆಫೀಸರ್ ನರೇಂದ್ರ ಶರ್ಮಾ, ರಾಷ್ಟ್ರೀಯ ಹೆದ್ದಾರಿ ಅಧೀಕ್ಷಕ ಇಂಜಿನಿಯರ್ ರಾಜೇಶ್, ಕಾರ್ಯಪಾಲಕ ಇಂಜಿನಿಯರ್ ದಿವಾಕರ್‌ ಹಾಜರಿದ್ದರು.

Click here

Click here

Click here

Click Here

Call us

Call us

Leave a Reply