ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ಪುಟಾಣಿಗಳಿಗೆ ’ನ್ಯೂಟ್ರಿಶಿಯನ್ ಡೇ’ ಆಚರಿಸಲಾಯಿತು.
ಸಣ್ಣ ಮಕ್ಕಳಲ್ಲಿ ಆರೋಗ್ಯಕರ ಆಹಾರದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ವಿವಿಧ ಬಗೆಯ ಹಣ್ಣುಗಳ ಹಾಗೂ ತರಕಾರಿಗಳ ಸಲಾಡ್‌ಗಳನ್ನು ತಯಾರಿಸಿ ಹಂಚಲಾಯಿತು. ಪೌಷ್ಟಿಕ ಆಹಾರದ ಬಗ್ಗೆ ತಿಳಿ ಹೇಳಲಾಯಿತು.
ಈ ಸಂದರ್ಭದಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜ ಹಾಗೂ ಸಹಶಿಕ್ಷಕಿಯರು ಉಪಸ್ಥಿತರಿದ್ದರು.