ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲುರು: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ಕೊಲ್ಲೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜಿನ ಬಾಲಕ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ನವೆಂಬರ ತಿಂಗಳಿನಲ್ಲಿ ಕೊಲ್ಲೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.
ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಕುಮಾರ ಶೆಟ್ಟಿ, ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ವನಿತಾ ಉದಯ ಶೇರುಗಾರ್, ದೇವಳದ ಅಭಿಯಂತರರಾದ ಪ್ರದೀಪ್ ಕುಮಾರ್, ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ಪೂಜಾರಿ, ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಕೃಷ್ಣ ಜಿ.ಬಿ, ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ ಶೆಟ್ಟಿ ಹೊಸಮಠ, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸಚಿನ ಕುಮಾರ್ ಶೆಟ್ಟಿ ಹುಂಚನಿ, ಬೀಸಿನಪಾರೆ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ರಾಜೀವ ಶೆಟ್ಟಿ, ಕಾಲೇಜಿನ ಸಮಾಜಶಾಸ್ತ್ರ ಉಪನ್ಯಾಸಕ ನಾಗರಾಜ ಅಡಿಗ, ಆಂಗ್ಲಭಾಷಾ ಉಪನ್ಯಾಸಕಿ ಪೂರ್ಣಿಮಾ ಎನ್. ಜೋಯಿಸ , ರಾಜ್ಯಮಟ್ಟದ ನೆಟ್ ಬಾಲ್ ತೀರ್ಪುಗಾರ ಅವಿನಾಶ್ ಆಚಾರ್ಯ ಕೊಲ್ಲೂರು ರಾಷ್ಟ್ರಮಟ್ಟದ ನೆಟ್ ಬಾಲ್ ಆಟಗಾರರಾದ ಗಣೇಶ್ ಕೊಠಾರಿ, ಪೃಥ್ವಿನ್ ಗಾಣಿಗ, ಕೀರ್ತನ ವೇದಿಕೆಯಲ್ಲಿ ಉಪಸ್ಥಿತರಿದ್ದರು.