ಎಕ್ಸಲೆಂಟ್ ಪ.ಪೂ ಕಾಲೇಜು: ಪುಟ್ಬಾಲ್ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ       

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಆ.1ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಡಾ. ಎನ್.ಎಸ್.ಎ.ಎಂ ಪದವಿ ಪೂರ್ವ ಕಾಲೇಜು ನಿಟ್ಟೆ, ಕಾರ್ಕಳ ಇವರ ಸಹಭಾಗಿತ್ವದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಕುಂದಾಪುರ ವಲಯವು ಉಡುಪಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಮುಂದೆ ನಡೆಯುವ ರಾಜ್ಯ ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಆಯ್ಕೆಗೊಂಡಿದೆ.

Call us

Click Here

ಎಕ್ಸಲೆಂಟ್ ವಿದ್ಯಾಸಂಸ್ಥೆಯ ಪುಟ್ಬಾಲ್ ಪ್ರತಿಭೆಗಳಾದ ಪ್ರಥಮ್ ಎಸ್. ಶೆಟ್ಟಿ ಮತ್ತು ಎಲಿಕ್ ಅಬ್ರಾನ್ ದಾಲ್‌ಮೇದಾ ಅವರು ಜಿಲ್ಲಾತಂಡದ ಅತ್ಯುತ್ತಮ ಆಟಗಾರರಾಗಿ ಹೊರಹೊಮ್ಮಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಎಕ್ಸಲೆಂಟ್ ವಿದ್ಯಾಸಂಸ್ಥೆಯು ಕೇವಲ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದದ್ದಲ್ಲದೆ, ಸಾಂಸ್ಕೃತಿಕ, ಪ್ರತಿಭಾ ಕಾರಂಜಿ ಹಾಗೂ ಕ್ರೀಡಾಕ್ಷೇತ್ರದಲ್ಲೂ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿಯೂ ತನ್ನ ಹಿರಿಮೆಯ ಛಾಪನ್ನು ಮೂಡಿಸಿ ಅದೆಷ್ಟೊ ಪ್ರಶಸ್ತಿಗಳನ್ನು ತನ್ನ ಮೂಡಿಗೇರಿಸಿಕೊಂಡಿದೆ.

ಅವರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Leave a Reply