Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಹಾತ್ಮಾ ಗಾಂಧೀಜಿ ಅವರ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಮಹಾತ್ಮಾ ಗಾಂಧೀಜಿ ಅವರ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಮಹಾತ್ಮಾ ಗಾಂಧೀಜಿ ಅವರ ಸತ್ಯ, ಶಾಂತಿ, ಅಹಿಂಸಾ ತತ್ವಗಳು ಇಂದಿಗೂ ಪ್ರಸ್ತುತವಾಗಿದ್ದು, ಪ್ರತಿಯೊಬ್ಬರೂ ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು, ಗಾಂಧೀಜಿ ಅವರಿಗೆ ಗೌರವ ಸಲ್ಲಿಸುವ ಮೂಲಕ ಗಾಂಧಿ ಜಯಂತಿ ದಿನಾಚರಣೆಯನ್ನು ಅರ್ಥಪೂರ್ಣವಾಗಿಸೋಣ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದರು.

    Click Here

    Call us

    Click Here

    ಅವರು ಅಂದು ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಸಭೆ ಉಡುಪಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ & ಉಡುಪಿ ಜಿಲ್ಲಾ ಸಮಸ್ತ ಸಹಕಾರಿ ಇವರ ನೇತೃತ್ವದಲ್ಲಿ ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರ, ಲಿಯೋ ಡಿಸ್ಟಿçಕ್ಟ್ 317 ಸಿ ಮತ್ತು ಕ್ರಿಶ್ಚಿಯನ್ ಪಿ.ಯು ಕಾಲೇಜು, ಲಯನ್ಸ್ ಕ್ಲಬ್ ಉಡುಪಿ ಇಂದ್ರಾಳಿ ಮತ್ತು ಲಯನ್ಸ್ ಕ್ಲಬ್ ಉಡುಪಿ ಚೇತನ ಹಾಗೂ ಲಂಬಾರ್ಡ್ ಮೆಮೋರಿಯಲ್ ಮಿಷನ್ ಆಸ್ಪತ್ರೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಅಜ್ಜರಕಾಡು ಪುರಭವನದಲ್ಲಿ ನಡೆದ ಜಿಲ್ಲಾ ಮಟ್ಟದ 155 ನೇ ಗಾಂಧಿ ಜಯಂತಿ ಕಾರ್ಯಕ್ರಮದ ಸಮಾರೋಪ ಸಮಾರಂಭದ ಸಭಾ ಕಾರ್ಯಕ್ರಮದಲ್ಲಿ ಚರಕದ ರಾಟೆಗೆ ನೂಲು ಹಾಕುವ ಮೂಲಕ ಚಾಲನೆ ನೀಡಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಪ್ರತಿಯೊಬ್ಬರೂ ಬಹಿರಂಗ ಸ್ವಚ್ಛತೆಯ ಜೊತೆಗೆ ಅಂತರಂಗದ ಸ್ವಚ್ಛತೆಯನ್ನು ಹೊಂದಿರಬೇಕು. ಗಾಂಧೀಜಿಯವರ ಆತ್ಮಚರಿತ್ರೆಯನ್ನು ಓದಿದಾಗ ಅವರು ವಿಶ್ವ ನಾಯಕನಾಗಿ ಬೆಳೆಯುವ ಹಂತವನ್ನು ಹಾಗೂ ಇತರರ ಲೇಖನಗಳಲ್ಲಿ ಅವರ ಬದುಕಿನ ಏಳು-ಬೀಳುಗಳನ್ನು ಸಂಕ್ಷಿಪ್ತವಾಗಿ ಗಮನಿಸಿದಾಗ ಒಬ್ಬ ಸಾಮಾನ್ಯ ವ್ಯಕ್ತಿ ಮಹಾತ್ಮರಾಗಿರುವುದನ್ನು ಕಾಣಬಹುದಾಗಿದೆ ಎಂದರು.

    ಕೆಲಸಕ್ಕಾಗಿ ವಕೀಲ ವೃತ್ತಿಗೆ ದಕ್ಷಿಣ ಆಫ್ರಿಕಾಗೆ ತೆರಳಿದ ಸಂದರ್ಭದಲ್ಲಿ ಅಲ್ಲಿನ ಸ್ಥಳೀಯರಿಗೆ ಬ್ರಿಟಿಷರು ನೀಡುತ್ತಿದ್ದ ದಬ್ಬಾಳಿಕೆಯನ್ನು ಮನಗಂಡು ಹೋರಾಟಕ್ಕೆ ಇಳಿದ ಗಾಂಧೀಜಿ, ಬ್ರಿಟಿಷ್ ಅಧಿಕಾರಿಗಳು ಸಾಕಷ್ಟು ತೊಂದರೆ ನೀಡದರೂ ಸಹ ಅದನ್ನೆಲ್ಲಾ ಎದುರಿಸಿ ಹೋರಾಟ ಮಾಡಿ, ನಂತರ ಭಾರತಕ್ಕೆ ಬಂದು ಸ್ವಾತಂತ್ರö್ಯಕ್ಕಾಗಿ ಮುಂಚೂಣಿಯಲ್ಲಿ ನಿಂತ ಇವರು, ಬ್ರಿಟಿಷರು ಯುದ್ಧ ಮಾಡುವ ಸಂದರ್ಭದಲ್ಲಿ ಅಹಿಂಸಾ ಸತ್ಯಾಗ್ರಹವನ್ನು ಮಾಡಿ ಬ್ರಿಟಿಷರನ್ನು ಸೋಲಿಸುವ ಮೂಲಕ ಸ್ವಾತ್ರಂತ್ರ ಹೋರಾಟಗಾರರಿಗೆ ಸ್ಪೂರ್ತಿಯಾಗಿದ್ದರು ಎಂದರು. 

    ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಮುಖ್ಯ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಮಹಾತ್ಮಾ ಗಾಂಧೀಜಿಯವರು ತಮ್ಮ ಜೀವನದಲ್ಲಿ ಸ್ವಚ್ಛತೆಗೆ ಹೆಚ್ಚು ಮಹತ್ವ ನೀಡಿದ್ದರು. ಸ್ವಚ್ಛತಾ ಕಾರ್ಯಗಳು  ಕೇವಲ ಅವರ ದಿನಾಚರಣೆಗೆ ಮಾತ್ರ ಸೀಮಿತವಾಗಿರದೇ, ದೈನಂದಿನಗಳಲ್ಲಿಯೂ ತಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸುವ ಮೂಲಕ ಅವರ ಶಿಸ್ತು, ಸಂಯಮ, ಸೇವಾ ಪರಿಕಲ್ಪನೆಯನ್ನು ಬಾಲ್ಯದಿಂದಲೇ ರೂಢಿಸಿಕೊಳ್ಳಬೇಕು ಎಂದರು.

    Click here

    Click here

    Click here

    Call us

    Call us

    ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹ ಪ್ರಾಧ್ಯಾಪಕ ಪ್ರಸಾದ್ ರಾವ್ ಎಂ ಉಪನ್ಯಾಸ ನೀಡಿ ಮಾತನಾಡಿ, ಇಂದು ಭಾರತದ ಇತಿಹಾಸದಲ್ಲಿ ವಿಶೇಷವಾದ ದಿನ. ಮಹಾತ್ಮಾ ಗಾಂಧೀಜಿಯವರ ಜಯಂತಿಯ ಜೊತೆಗೆ ಅಂತಾ ರಾಷ್ಟ್ರೀಯ ಮಟ್ಟದಲ್ಲಿ ಶಾಂತಿ ದಿನ ಹಾಗೂ ದಿಟ್ಟ ನಿರ್ಧಾರಗಳ ಅಸಮಾನ್ಯ ನಾಯಕರಾದ ಲಾಲ್ ಬಹದ್ದೂರು ಶಾಸ್ತ್ರಿ ಅವರ ಜನ್ಮ ದಿನವೂ ಕೂಡ ಇಂದಾಗಿದ್ದು, ಗಾಂಧೀಜಿಯವರನ್ನು ಪ್ರೀತಿಸಲು ಹಲವಾರು ಕಾರಣಗಳಿವೆ. ಸರ್ವರನ್ನೂ ಸಮಾನ ರೀತಿಯಲ್ಲಿ ಕಾಣುವುದರೊಂದಿಗೆ ಸಮಾಜದಲ್ಲಿ ಮೇಲು-ಕೀಳು ಎಂಬ ಭಾವವನ್ನು ಹೋಗಲಾಡಿಸಲು ಶ್ರಮಿಸಿದರು. ವ್ಯಕ್ತಿಯನ್ನು ಗೌರವಿಸಿದರೆ, ದೇವರನ್ನು ಗೌರವಿಸಿದಂತೆ ಎಂಬ ಮನೋಭಾವ ಹೊಂದಿದ್ದ ಅವರು, ಹೋರಾಟವನ್ನು ಹಿಂಸಾ ಮಾರ್ಗವನ್ನು ಹೊರತುಪಡಿಸಿಯೂ ಅಹಿಂಸಾ ಮಾರ್ಗ, ಶಾಂತಿಯ ಮಾತುಕತೆಯ ಮೂಲಕ ಪರಿಹಾರ ಕಂಡುಕೊಳ್ಳುತ್ತಿದ್ದರು ಎಂದರು. 

    ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಾತ್ಮ ಗಾಂಧೀಜಿ ಅವರ ಚಿಂತನೆಗಳನ್ನು ಪಾಲಿಸುವುದರೊಂದಿಗೆ ಅವುಗಳನ್ನು ಜೀವನದುದ್ದಕ್ಕೂ ಅಳವಡಿಸಿಕೊಳ್ಳುವ ದೃಢ ನಿರ್ಧಾರ ಕೈಗೊಂಡು, ಯಶಸ್ವಿ ಜೀವನವನ್ನು ರೂಪಿಸಿಕೊಳ್ಳಬೇಕು ಎಂದರು.

    ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗಾಂಧೀ ಜಯಂತಿ ಅಂಗವಾಗಿ ಪ್ರೌಢ ಶಾಲಾ ವಿಭಾಗ, ಪದವಿ ಪೂರ್ವ ವಿಭಾಗ ಹಾಗೂ ಪದವಿ ಮತ್ತು ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಪ್ರೌಢಶಾಲಾ ವಿಭಾಗದ ಸಾಕ್ಷಿ ಕುಲಾಲ್ ಪ್ರಥಮ, ಮೈತ್ರಿ ದ್ವಿತೀಯ ಹಾಗೂ ಶಿವಾನಿ ತೃತೀಯ ಸ್ಥಾನ, ಪದವಿ ಪೂರ್ವ ಶಿಕ್ಷಣ ವಿಭಾಗದ ರಕ್ಷಿತಾ ಭಟ್ ಪ್ರಥಮ, ಪನ್ನಿಧಿ ಡಿ. ಶೆಟ್ಟಿ ದ್ವಿತೀಯ ಹಾಗೂ ದಿವ್ಯ ತೃತೀಯ ಮತ್ತು  ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ಭೀಮಾಂಬಿಕಾ ಪ್ರಥಮ, ಅಮಿಷಾ ದ್ವಿತೀಯ ಹಾಗೂ ಅಶ್ವಿನಿ ಡಿ.ಎಸ್ ತೃತೀಯ ಸ್ಥಾನ ಅವರಿಗೆ ನಗದು ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು ಹಾಗೂ ಗಾಂಧೀಜಿ ಅವರ ಸವಿನೆನಪುಗಳ ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು.

    ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಎಎಸ್‌ಪಿ ಎಸ್. ಟಿ ಸಿದ್ದಲಿಂಗಪ್ಪ, ಲಯನ್ಸ್ ಜಿಲ್ಲಾ ಗವರ್ನರ್ ಮೊಹಮ್ಮದ್ ಹನೀಫ್, ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರದ ಕೃಷ್ಣಯ್ಯ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಶೇರಿಗಾರ್, ಲಯನ್ಸ್ ಕ್ಲಬ್ ಉಡುಪಿ ಚೇತನ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ವಿವಿಧ ಜಿಲ್ಲಾ ಮಟ್ಟದ ಅಧಿಖಾ;ರಿಗಳು, ಸಿಬ್ಬಂದಿಗಳು, ಕಾಲೇಜುಗಳ ವಿದ್ಯಾರ್ಥಿಗಳು  ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    ಪೌರಾಯುಕ್ತ ರಾಯಪ್ಪ ಸ್ವಾಗತಿಸಿದರೆ, ದಯಾನಂದ ನಿರೂಪಿಸಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ. ವಂದಿಸಿದರು.

    ಕಾರ್ಯಕ್ರಮಕ್ಕೂ ಮುನ್ನ ಬೆಳಗ್ಗೆ 7 ಗಂಟೆಗೆ ಜಿಲ್ಲಾಡಳಿತ ಹಾಗೂ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ನಗರದ ಹಳೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

    ಬೆಳಗ್ಗೆ 8.30 ಕ್ಕೆ ನಗರದ ಪ್ರಮುಖ ಬೀದಿಗಳ ಮೂಲಕ ಸ್ವಚ್ಛತಾ ನಡಿಗೆ ಜಾಥಾವು ಸರ್ವೀಸ್ ಬಸ್ ನಿಲ್ದಾಣದ ಕ್ಲಾಕ್ ಟವರ್‌ನಿಂದ ಅಜ್ಜರಕಾಡಿನ ಪುರಭವನದ ವರೆಗೆ ನಡೆಯಿತು. ಜಾಥಾದಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಸ್ಕೌಟ್ಸ್ ಮತ್ತು ಗೈಡ್ಸ್ನ ವಿದ್ಯಾರ್ಥಿಗಳು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿ, ಸ್ವಚ್ಛತೆಯ ಘೋಷ ವಾಕ್ಯಗಳನ್ನು ದಾರಿಯುದ್ದಕ್ಕೂ ಸಾರಿದರು. ನಂತರ ಅಜ್ಜರಕಾಡು ಭುಜಂಗ ಶೆಟ್ಟಿ ಪಾರ್ಕ್ನ ಗಾಂಧಿ ಕಟ್ಟೆಯ ಬಳಿಯ ಗಾಂಧಿ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಲಾಯಿತು.  

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ

    19/12/2025

    ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    19/12/2025

    ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ
    • ವೃದ್ಧೆ ನಾಪತ್ತೆ
    • ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.