ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುಂದಾಪುರ ಯೋಜನಾ ವ್ಯಾಪ್ತಿಯ ಸಿಬ್ಬಂದಿಗಳ ೨೦೧೫-೧೬ನೇ ಸಾಲಿನ ಸ್ನೇಹಕೂಟ ಇತ್ತೀಚೆಗೆ ಕುಂದಾಪುರದ ವ್ಯಾಸರಾಜ ಕಲ್ಯಾಣ ಮಂಟಪದಲ್ಲಿ ನಡೆಯಿತು.
ಉಡುಪಿ ಜಿಲ್ಲಾ ಪ್ರಾದೇಶಿಕ ಕಛೇರಿಯ ನಿರ್ದೇಶಕರಾದ ಮಹಾವೀರ ಅಜ್ರಿ, ಜಿಲ್ಲಾ ನಿರ್ದೇಶಕರಾದ ದುಗ್ಗೇಗೌಡ, ತಾಲೂಕು ಯೋಜನಾಧಿಕಾರಿ ಅಮರಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. ಯೋಜನಾ ಕಛೇರಿ ಸಿಬ್ಬಂದಿಗಳು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರಥಮ ಬಹುಮಾನ ಪಡೆದಿದ್ದು, ಬಸ್ರೂರು ವಲಯದವರು ದ್ವಿತೀಯ ಬಹುಮಾನ ಪಡೆದಿದ್ದಾರೆ.