ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ , ಗುರುವಾರ ಧಾರ್ಮಿಕ ಕಾರ್ಯಕ್ರಮಳಿಗೆ ಚಾಲನೆ ನೀಡಲಾಯಿತು.

ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ನಾಗರಾಜ ಶೆಟ್ಟಿ , ಕಾರ್ಯದರ್ಶಿ ಶಿವರಾಮ ಪೂಜಾರಿ, ಅರ್ಚಕರಾದ ಕೃಷ್ಣ ಮೂರ್ತಿ ನಾವಡ , ಸದಸ್ಯರುಗಳಾದ ನಾಗರಾಜ ಗಾಣಿಗ, ಪ್ರಸನ್ನ, ಎಸ್. ಮಣಿಕಂಠ ಬೈಂದೂರು, ಶಂಕರ, ಅಣ್ಣಪ್ಪ ಪೂಜಾರಿ ಉಪಸ್ಥಿತರಿದ್ದರು.
ದೇವಸ್ಥಾನದಲ್ಲಿ ನವೆಂಬರ್ 3 ರಿಂದ ನವೆಂಬರ್ 12ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.










