ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ – ಕಾಂಗ್ರೆಸ್‌ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ,ಅ.03:
ವಿಧಾನ ಪರಿಷತ್ ಸ್ಥಳಿಯಾಡಳಿತ ಕ್ಷೇತ್ರದ ಉಪಚುನಾವಣೆ ಅ.21ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಬಿಜೆಪಿ, ಕಾಂಗ್ರೆಸ್ ಮತ್ತು ಎಸ್ಡಿಪಿಐ ಪಕ್ಷದ ಅಭ್ಯರ್ಥಿಗಳು ಮಂಗಳೂರಿನಲ್ಲಿ ನಾಮಪತ್ರ ಸಲ್ಲಿಸಿದರು. ಬಿಜೆಪಿಯಿಂದ ಕಿಶೋರ್ ಕುಮಾರ್ ಪುತ್ತೂರು, ಕಾಂಗ್ರೆಸ್ ನಿಂದ ರಾಜು ಪೂಜಾರಿ ಮತ್ತು ಎಸ್ಡಿಪಿಐನಿಂದ ಅನ್ವರ್ ಸಾದತ್ ಬಜತ್ತೂರು ನಾಮಪತ್ರ ಸಲ್ಲಿಸಿದರು.

Call us

Click Here

ಮಂಗಳವಾರ ಒಂದು ನಾಮಪತ್ರ ಸಲ್ಲಿಕೆಯಾಗಿತ್ತು. ಇಂದು ಮೂರು ಅಭ್ಯರ್ಥಿಗಳ ನಾಮಪತ್ರ ಸೇರಿ ಒಟ್ಟು ನಾಲ್ಕು ಮಂದಿ ನಾಮಪತ್ರ ಸಲ್ಲಿಸಿದಂತಾಗಿದೆ. ಮಂಗಳೂರು ಜಿಲ್ಲಾಧಿಕಾರಿ ಮತ್ತು ಚುನಾವಣಾಧಿಕಾರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರಿಗೆ ನಾಮಪತ್ರ ಸಲ್ಲಿಸಲಾಗಿದೆ.

ನಾಮಪತ್ರ ಸಲ್ಲಿಕೆಗೆ ಮುನ್ನ ಮಾತನಾಡಿದ ಬಿಜೆಪಿ‌ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಮಾತನಾಡಿ ಸಾಮಾನ್ಯ ಕಾರ್ಯಕರ್ತನಿಗೆ ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ. ದೊಡ್ಡ ಜವಾಬ್ದಾರಿ ಸಿಕ್ಕಿದೆ. ಜವಾಬ್ದಾರಿಗೆ ನ್ಯಾಯ ಕೊಡುವ ಕೆಲಸ ಮಾಡುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಮಾತನಾಡಿ, 20 ವರ್ಷಗಳಿಂದ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಗ್ರಾಪಂ, ತಾಪಂ ಸದಸ್ಯನಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷನಾಗಿ ಅನುಭವ ಹೊಂದಿದ್ದೇನೆ. ಸ್ಥಳೀಯ ಸಂಸ್ಥೆಗಳ ಎಲ್ಲಾ ಸಮಸ್ಯೆಗಳ ಅರಿವು ನನಗಿದೆ. ಆದ ಕಾರಣ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತೇನೆ ಎಂದಿದ್ದಾರೆ.

Leave a Reply