ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾನವರಾತ್ರಿ ಉತ್ಸವಕ್ಕೆ ಚಾಲನೆ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೊಲ್ಲೂರು,ಅ.3:
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾನವರಾತ್ರಿ ಮಹೋತ್ಸವಕ್ಕೆ ಗುರುವಾರ ಚಾಲನೆ ನೀಡಲಾಯಿತು. ದೇವಳದ ತಂತ್ರಿಗಳಾದ ಸುಬ್ರಹ್ಮಣ್ಯ ಅಡಿಗ ಅವರ ನೇತೃತ್ವದಲ್ಲಿ ಬೆಳಗ್ಗೆ ಗಣಪತಿ ಪೂಜೆಯೊಂದಿಗೆ ನವರಾತ್ರಿ ಪರ್ವಕ್ಕೆ ಚಾಲನೆ ನೀಡಿದ ಬಳಿಕ ಶ್ರೀದೇವಿಗೆ ವಿಶೇಷ ಪೂಜೆ, ಮಂಗಳಾರತಿ ನಡೆಯಿತು.

Call us

Click Here

ಬಳಿಕ ನವರಾತ್ರಿ ಮಹೋತ್ಸವದ ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭ ಕುಂದಾಪುರ ಸಹಾಯಕ ಕಮೀಷನರ್‌ ಮಹೇಶ್ಚಂದ್ರ , ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್‌ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯ ಕೆ. ಬಾಬು ಶೆಟ್ಟಿ ಹಾಗೂ ಭಕ್ತ ರ್ಗದವರು ಉಪಸ್ಥಿತರಿದ್ದರು.

Leave a Reply