ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕೆ. ಬಾಬು ಶೆಟ್ಟಿ ಅವರು ಅವಿರೋಧ ಆಯ್ಕೆಯಾಗಿದ್ದಾರೆ.
ಶುಕ್ರವಾರ ನಡೆದ ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಅರ್ಚಕ ನಿತ್ಯಾನಂದ ಅಡಿಗ, ಮಹಾಲಿಂಗ ನಾಯ್ಕ್, ಧನಾಕ್ಷಿ ವಿಶ್ವನಾಥ, ಸುಧಾ ಕೆ. ಪಡುವರಿ, ಕೆ. ಸುರೇಂದ್ರ ಶೆಟ್ಟಿ, ಅಭಿಲಾಷ್ ಪಿ.ವಿ, ಯು. ರಾಜೇಶ್ ಕಾರಂತ್, ರಘುರಾಮ ದೇವಾಡಿಗ ಅವರು ಮೊದಲ ಸಭೆಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.
ಕುಂದಾಪುರ ಎಸಿ ಮಹೇಶ್ಚಂದ್ರ ಆಯ್ಕೆ ಪ್ರಕ್ರಿಯೆ ನಡೆಸಿದರು. ದೇವಳದ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು. ಕೆ. ಬಾಬು ಶೆಟ್ಟಿ ಅವರು ಈ ಮೊದಲು ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.