ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಉಪ್ಪುಂದ ಗ್ರಾ.ಪಂ. ವ್ಯಾಪ್ತಿಯ ಮಡಿಕಲ್ ಮತ್ತು ಕರ್ಕಿಕಳಿ ಭಾಗದಲ್ಲಿ ಕಳೆದೊಂದು ವಾರದಿಂದ ಶಂಕಿತ ಕಾಲಾರ ರೋಗ ಕಾಣಿಸಿಕೊಂಡು ನೂರಕ್ಕೂ ಅಧಿಕ ಜನರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ತಹಶೀಲ್ದಾರ ಪ್ರದೀಪ್ ಹಾಗೂ ಆರೋಗ್ಯ ಇಲಾಖಾ ಅಧಿಕಾರಿಗಳು ಇತ್ತೀಚಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗ್ರಾಮ ಪಂಚಾಯಿತಿಯಿಂದ ಸರಬರಾಜಾಗುತ್ತಿರುವ ಕುಡಿಯುವ ನೀರಿನಿಂದ ಈ ರೋಗ ಕಾಣಿಸಿಕೊಂಡಿದೆ ಎಂದು ಜನರು ಅನುಮಾನ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಆ ನೀರಿನ ಸ್ಯಾಂಪಲ್‌ನ್ನು ಟೆಸ್ಟ್‌ಗೆ ಕಳುಹಿಸಿ, ಅದರ ವರದಿ ಆಧರಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖಾ ಅಧಿಕಾರಿಗಳು ಜನರಿಗೆ ಭರವಸೆ ನೀಡಿದರು.
ಈ ಸಂದರ್ಭ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಕಾರಿ ಭಾರತಿ, ತಾಲೂಕು ವೈದ್ಯಾಕಾರಿ ಡಾ. ರಾಜೇಶ್, ಬೈಂದೂರು ಠಾಣಾಕಾರಿ ತಿಮ್ಮೇಶ್, ಉಪ್ಪುಂದ ಗ್ರಾ.ಪಂ. ಪಿಡಿಓ ಸುದರ್ಶನ ಎಸ್., ಕಾರ್ಯದರ್ಶಿ ಗಿರಿಜಾ, ಕರಾವಳಿ ಕಾವಲುಪಡೆಯ ಸಿಬ್ಬಂದಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಮತ್ತಿತರರು ಉಪಸ್ಥಿತರಿದ್ದರು.