ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗದ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ https://shp.karnataka.gov.in/bcwdನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004, 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.