ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಗಿನ್ನೆಸ್ ವಿಶ್ವ ದಾಖಲೆಯ ಪ್ರಮಾಣ ಪತ್ರ ವಿತರಣೆ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
2023-24ನೇ ನೇ ಶೈಕ್ಷಣಿಕ ಸಾಲಿನಲ್ಲಿ 6000 ರೂಬಿಕ್ ಕ್ಯೂಬ್‌ಗಳನ್ನು ಬಳಸಿ ವಿಶ್ವದ ಅತಿ ದೊಡ್ಡ ದ್ವಿಮುಖ ಚಿತ್ರದ ರಚನೆ ಮತ್ತು ಅತಿ ಹೆಚ್ಚು ಜನರ ಪಾಲ್ಗೊಳ್ಳುವಿಕೆಯಲ್ಲಿ ಫಜಲ್‌ಕ್ಯೂಬ್ ಮೊಸಾಯಿಕ್ ರಚನೆಯ ಮೂಲಕ ಅವಳಿ ಗಿನ್ನೆಸ್ ದಾಖಲೆಯನ್ನು ಸೃಷ್ಟಿಸಿದ್ದ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಗಿನ್ನೆಸ್ ಸಂಸ್ಥೆಯ ಅಧೀಕೃತ ಪದಕ ಮತ್ತು ಪ್ರಮಾಣಪತ್ರ ವಿತರಣೆಯ ಸಮಾರಂಭವು ಜರುಗಿತು.

Call us

Click Here

ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ವಿಧಾನ ಪರಿಷತ್‌ನ ಮಾಜಿ ಸದಸ್ಯರು, ಕರ್ನಾಟಕ ಸರ್ಕಾರದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರಣಿಕ್ ಮಾತನಾಡುತ್ತಾ, ಶಿಕ್ಷಣವು ಸರ್ವತೋಮುಖವಾಗಿರಬೇಕು. ವಿದ್ಯಾರ್ಥಿಗಳಲ್ಲಿರುವ ಕ್ರಿಯಾಶೀಲತೆಯನ್ನು ಸದುಪಯೋಗಪಡಿಸಿಕೊಳ್ಳಬೇಕು. ಹಾಗೆ ಮಾಡಿದಾಗ ವಿದ್ಯಾರ್ಥಿಗಳಿಗೆ ಅವರ ಪ್ರತಿಭೆಯ ಪರಿಚಯವಾಗುವುದು. ಗಿನ್ನಿಸ್ ದಾಖಲೆಯು ಅಂತಹ ಉದಾತ್ತ ಉದ್ದೇಶದಿಂದ ಮಾಡಲ್ಪಟ್ಟಿದೆ. ಅದು ವಿದ್ಯಾರ್ಥಿಗಳ ಜೀವನದ ಮಹತ್ವವಾದ ಸಾಧನೆಯಾಗಿದ್ದು, ಪ್ರಮಾಣಪತ್ರವೂ ರಾಷ್ಟ್ರಮಟ್ಟದಲ್ಲಿ ಅವರು ತಮ್ಮನ್ನು ಗುರುತಿಸಿಕೊಳ್ಳಲು ಸಹಾಯಕವಾಗುತ್ತದೆ ಎಂದರು.

ಇನ್ನೋರ್ವ ಮುಖ್ಯ ಅತಿಥಿ ಜನಸೇವಾ ಟ್ರಸ್ಟ್ ಮೂಡುಗಿಳಿಯಾರ ಇದರ ಅಧ್ಯಕ್ಷರಾದ ವಸಂತ ಗಿಳಿಯಾರ್ ಮಾತನಾಡುತ್ತಾ, ಈ ಗಿನ್ನೆಸ್ ದಾಖಲೆಯು ಮಕ್ಕಳ ಜೀವನದ ಅಮೂಲ್ಯ, ಅವಿಸ್ಮರಣೀಯ ಸಾಧನೆಯಾಗಿದ್ದು, ಜೀವನದುದ್ದಕ್ಕೂ ಇದು ಸವಿನೆನಪಾಗಿ ಉಳಿಯಲಿದೆ. ಈ ಪದಕ ಮತ್ತು ಪ್ರಮಾಣಪತ್ರಗಳು ಮುಂದಿನ ಜನಾಂಗಕ್ಕೂ ಸ್ಪೂರ್ತಿಯ ಚಿಲುಮೆಯಾಗಿ, ಹೊಸ ಹೊಸ ಸಾಧನೆಗಳಿಗೆ ನಾಂದಿಯಾಗಲಿವೆ ಎಂದು ಅಭಿಪ್ರಾಯಪಟ್ಟರು.

ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ ಹಟ್ಟಿಯಂಗಡಿ ಇದರ ಕಾರ್ಯದರ್ಶಿಗಳೂ ಹಾಗೂ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಕ್ಕಳಿಗೆ ತರಬೇತಿ ನೀಡಿದ ಶಿಕ್ಷಕರಾದ ಶಿವಾನಂದ ಹಾಗೂ ಅಶ್ವಿನಿ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.

ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ, ಹಟ್ಟಿಯಂಗಡಿ ಇದರ ಟ್ರಸ್ಟಿಗಳಾದ ಹೆಚ್ ಗಣೇಶ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಭೂಮಾಪನ ಇಲಾಖೆಯ ಎ.ಡಿ.ಎಲ್.ಆರ್ ಪುಷ್ಪರಾಜ ಪೂಜಾರಿ, ಹಟ್ಟಿಯಂಗಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ಕೆ.ರಾಜೀವ ಶೆಟ್ಟಿ, ಶಾಲಾ ಆಡಳಿತಾಧಿಕಾರಿ ವೀಣಾರಶ್ಮಿ ಎಮ್. ಶಾಲಾ ಉಪ ಪ್ರಾಂಶುಪಾಲ ರಾಮ ದೇವಾಡಿಗ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಸುಜಾತಾ ಸದಾರಾಮ್, ಶಿಕ್ಷಕ-ಶಿಕ್ಷಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Click here

Click here

Click here

Click Here

Call us

Call us

ಸಹಶಿಕ್ಷಕಿ ರಂಜಿತ ಗಿನ್ನಿಸ್ ದಾಖಲೆ ಮಾಡಿದ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ವಿದ್ಯಾರ್ಥಿ ಜಗದೀಶ ಅಂಗಡಿ ಕಾರ್ಯಕ್ರಮ ನಿರ್ವಹಿಸಿದರೆ, ವಿದ್ಯಾರ್ಥಿನಿ ಅನುಪ್ರಿಯ ಸ್ವಾಗತಿಸಿದರು. ವಿದ್ಯಾರ್ಥಿ ಯಶ್ ವಂದಿಸಿದರು.

Leave a Reply