Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಕಾಲೇಜಿನ ಸೂಕ್ಷ್ಮ ಜೀವವಿಜ್ಞಾನ ವಿಭಾಗದಲ್ಲಿ ಮೈಕ್ರೋಸ್ಪಾರ್ಕ್
    alvas nudisiri

    ಆಳ್ವಾಸ್ ಕಾಲೇಜಿನ ಸೂಕ್ಷ್ಮ ಜೀವವಿಜ್ಞಾನ ವಿಭಾಗದಲ್ಲಿ ಮೈಕ್ರೋಸ್ಪಾರ್ಕ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದರೆ:
    ’ವೈದ್ಯರು ಮತ್ತು ಎಂಜಿನಿಯರ್‌ಗಳಿಗೆ ಮಾತ್ರ ಜಗತ್ತಿನಲ್ಲಿ  ಬೇಡಿಕೆ ಇರುವುದಲ್ಲ, ಎಲ್ಲ ಕ್ಷೇತ್ರಗಳ ಪರಿಣತರ ಅವಶ್ಯಕತೆ ಇದೆ. ಸೂಕ್ಷ್ಮ ಜೀವವಿಜ್ಞಾನವು ವಿಜ್ಞಾನ ವಿದ್ಯಾರ್ಥಿಗಳಿಗೂ ನವೀನ’ ಎಂದು ಸೈಂಟ್ ಅಲೋಷಿಯಸ್ (ಪರಿಗಣಿತ ವಿಶ್ವವಿದ್ಯಾಲಯ)  ಸೂಕ್ಷ್ಮ ಜೀವ ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ವೈಶಾಲಿ ರೈ ಹೇಳಿದರು.

    Click Here

    Call us

    Click Here

    ವಿದ್ಯಾಗಿರಿ ಸುಂದರಿ ಆನಂದ ಆಳ್ವ ಆವರಣದ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಶುಕ್ರವಾರ ಸೂಕ್ಷ್ಮ ಜೀವವಿಜ್ಞಾನ ವಿಭಾಗವು ಆಯೋಜಿಸಿದ ಪಿಯು ವಿದ್ಯಾರ್ಥಿಗಳಿಗೆ ಒಂದು ದಿನದ ಕಾರ್ಯಾಗಾರ ’ಮೈಕ್ರೋಸ್ಪಾರ್ಕ್ʼ (ಕಾಣದ ಜಗತ್ತನ್ನು ಅನ್ವೇಷಿಸಿ) ಉದ್ಘಾಟಿಸಿ ಅವರು ಮಾತನಾಡಿದರು.

    ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರದ ಹೊಸ ಸಾಧ್ಯತೆ ಮತ್ತು ಆಯಾಮಗಳನ್ನು ಅನ್ವೇಷಿಸಬೇಕು. ನಿಮ್ಮ ಮಾತು ಮತ್ತು ಆಯ್ಕೆಗಳಲ್ಲಿ ಜವಾಬ್ದಾರಿ ಇರಬೇಕು ಎಂದರು.

    ಥಾಮಸ್ ಆಲ್ವಾ ಎಡಿಸನ್ ವಿದ್ಯುತ್ ದೀಪ ಕಂಡುಹಿಡಿಯುವ ಪ್ರಯೋಗದಲ್ಲಿ  ಸಾವಿರ ಬಾರಿ ವಿಫಲರಾಗಿರಬಹುದು. ಆದರೆ, ಅದು ವೈಫಲ್ಯವಲ್ಲ, ಸಾವಿರ ಸಾಧ್ಯತೆಗಳು ಎಂದು ಅವರು ವಿಶ್ಲೇಷಿಸಿದರು.

    ಸುಸ್ಥಿರತೆ ಇಂದಿನ ಅಗತ್ಯವಾಗಿದೆ. ಉದ್ಯಮಶೀಲತಾ ಕ್ಷೇತ್ರದಲ್ಲಿ ಸೂಕ್ಷ್ಮ ಜೀವವಿಜ್ಞಾನಕ್ಕೆ ಬೇಡಿಕೆ ಇದೆ. ಇಂತಹ ಪ್ರಾಯೋಗಿಕ ಕಾರ್ಯಾಗಾರಗಳು ಜ್ಞಾನದ ಹಂಚಿಕೆಗೆ ಸಹಕಾರಿ ಎಂದು ವಿವರಿಸಿದರು.

    Click here

    Click here

    Click here

    Call us

    Call us

    ನಿಮ್ಮ ಬಳಿಗೆ ಹಲವು ಅವಕಾಶಗಳು ಬರಬಹುದು. ಆದರೆ, ನಿಮ್ಮ ಆಯ್ಕೆ ಬಗ್ಗೆ ಸೂಕ್ಷ್ಮ ಆಗಿರಬೇಕು ಎಂದು ಎಚ್ಚರಿಸಿದರು.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ನಿನ್ನೆಯ ಆಧಾರದಲ್ಲಿ ಇಂದಿನ ಮಕ್ಕಳನ್ನು ತರಬೇತುಗೊಳಿಸಿದರೆ, ನಾಳೆ ಅವರು ವೃತ್ತಿಗೆ ಬಂದಾಗ ಏನೂ ತಿಳಿಯದಾಗುತ್ತಾರೆ. ಕಾಲದ ಸ್ಪಂದನೆ ಅವಶ್ಯ ಎಂದರು.

    ಸೂಕ್ಷ್ಮ ಜೀವವಿಜ್ಞಾನದ ಮೇಲೆ ಜಗತ್ತು ನಿಂತಿದೆ. ಸೂಕ್ಷ್ಮ ಜೀವವಿಜ್ಞಾನ ಸಣ್ಣ ಕ್ಷೇತ್ರವಾದರೂ ಜಗತ್ತಿನ ಬಹುದೊಡ್ಡ ಸಮಸ್ಯೆಗಳನ್ನು ಬಗೆಹರಿಸುತ್ತಿದೆ. ಇದು ವೈದ್ಯಕೀಯ ಮತ್ತು ತಂತ್ರಜ್ಞಾನವನ್ನು ಒಳಗೊಂಡಿದೆ. ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ತನ್ಮಯತೆ ಬಹುಮುಖ್ಯ ಎಂದು ವಿವರಿಸಿದರು.

    ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಮಾತನಾಡಿ, ಯಾವುದೇ ಕ್ಷೇತ್ರವನ್ನು ಆಯ್ಕೆ ಮಾಡುವ ಮೊದಲು ಆಸಕ್ತಿ ಮುಖ್ಯ. ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಎಂಬುದು ವಿಜ್ಞಾನದ ಎರಡು ಸಣ್ಣ ವಿಚಾರಗಳು. ವಿಜ್ಞಾನ ಕ್ಷೇತ್ರ ವಿಸ್ತೃತವಾಗಿದ್ದು, ಸಾರ್ವಕಾಲಿಕ ಸತ್ಯ ಎಂಬುದಿಲ್ಲ. ಇಂದಿನ ಪ್ರಮೇಯವು ನಾಳೆ ಅಪಥ್ಯವೂ ಆಗಬಹುದು ಎಂದರು.

    ಸೂಕ್ಷ್ಮ ಜೀವವಿಜ್ಞಾನ ವಿಭಾಗದ ಮುಖ್ಯಸ್ಥೆ ರಮ್ಯಾ ರೈ ಇದ್ದರು. ವಿದ್ಯಾರ್ಥಿ ಸಂಯೋಜಕರಾದ ಕೃತಿಮಾ ಭಟ್ ಸ್ವಾಗತಿಸಿ, ಸುಹಾಸ್ ವಂದಿಸಿದರು. ಮೇಘಾ ಬಿ.ವಿ. ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮಹಿಳಾ ಸಬಲೀಕರಣಕ್ಕೆ ಅರ್ಹತೆ, ಆತ್ಮವಿಶ್ವಾಸವೇ ಬಲ: ಶ್ಯಾಮಲಾ ಎಸ್. ಕುಂದರ್

    20/08/2026

    ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳ ಕಮಾಲ್

    20/08/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಫ್ರೀಡಂ ಪ್ರೆನ್ಯೂರ್‌ ಏಕಪಾತ್ರಾಭಿನಯ ಸ್ಪರ್ಧೆ

    19/08/2026
    Leave A Reply Cancel Reply

    three × 4 =

    Call us

    Click Here

    Call us

    Call us

    Call us
    Highest Viewed Recently
    • 56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ
    • ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ
    • ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು
    • ಸಾಸ್ತಾನದಿಂದ ಶ್ರೀ ಕ್ಷೇತ್ರ ತಿರುಪತಿಗೆ 16ನೇ ವರ್ಷದ ಬೃಹತ್ ಪಾದಯಾತ್ರೆ
    • ಮರವಂತೆ: ಅರಬ್ಬಿ ಸಮುದ್ರದಲ್ಲಿ ದೋಣಿ ಆಯತಪ್ಪಿ ಬಿದ್ದು ಮೀನುಗಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.