ಕೊಲ್ಲೂರು: ಕೊಲ್ಲೂರಿನಲ್ಲಿ ರಾಜ್ಯ ಸರಕಾರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮೂಖಾಂತರ ದೇವಳದ ವತಿಯಿಂದ ನಡೆದ ರೂ. 26 ಕೋಟಿ ವೆಚ್ಚದ ದೇವಳ ಹಾಗೂ ನಗರಕ್ಕೆ ಶುದ್ಧಿಕರಿಸಿದ ನೀರು ಸರಬರಾಜು, ಒಳಚರಂಡಿ ಮತ್ತು ಕೊಳಚೆನೀರು ಶುದ್ಧಿಕರಣ ಘಟಕ ನಿರ್ಮಾಣ ಕಾಮಗಾರಿಗೆ ರಾಜ್ಯ ನಗರಾಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಾಸಕ ಕೆ. ಗೋಪಾಲ ಪೂಜಾರಿ, ದೇವಳದ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣಪ್ರಸಾದ ಅಡ್ಯಂತಾಯ, ಕಾರ್ಯನಿರ್ವಹಣಾಧಿಕಾರಿ ಟಿ.ಆರ್.ಉಮಾ, ನಗರಾಭಿವೃದ್ಧಿಕೋಶ ಯೋಜನಾ ನಿರ್ದೇಶಕ ವಿ. ಪ್ರಸನ್ನ, ಗ್ರಾಪಂ ಅಧ್ಯಕ್ಷ ಕೆ. ಎನ್. ವಿಶ್ವನಾಥ ಅಡಿಗ, ಸಹಾಯಕ ಇಓ ಹೆಚ್. ಕೃಷ್ಣಮೂರ್ತಿ, ಜಿಪಂ ಸದಸ್ಯೆ ಸುಪ್ರೀತಾ ದೀಪಕ್ ಶೆಟ್ಟಿ, ತಾಪಂ ಸದಸ್ಯ ಕೆ. ರಮೇಶ ಗಾಣಿಗ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಯಾನಂದ ಹೋಬಳಿದಾರ್, ಡಾ.ಅತುಲ್‌ಕುಮಾರ್ ಶೆಟ್ಟಿ, ಶ್ರೀನಿವಾಸ ಕಲ್ಲೂರಾಯ, ಗುತ್ತಿಗೆದಾರ ವಾಸುದೇವ ಶೆಟ್ಟಿ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.