ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹ ಧನ: ಅರ್ಜಿ ಆಹ್ವಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕ್ರುಯಲರ್ ಡಿಸ್ಟ್ರೂಫಿ, ಪಾರ್ಕಿನ್ಸನ್ ಮತ್ತು ಮಲ್ಟಿಪಲ್ ಸ್ಕಿಲ್‍ರೋಸಿಸ್ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತೀ ಮಾಹೆ ರೂ. 1,000/- ಪ್ರೋತ್ಸಾಹಧನ ನೀಡುವ ಸಲುವಾಗಿ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಯೋಜನೆಯ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.

Call us

Click Here

ಸೆರೆಬ್ರಲ್ ಪಾಲ್ಸಿ, ಮಸ್ಕ್ರುಯಲರ್ ಡಿಸ್ಟ್ರೂಫಿ, ಪಾರ್ಕಿನ್ಸನ್ ಮತ್ತು ಮಲ್ಟಿಪಲ್ ಸ್ಕಿಲ್‍ರೋಸಿಸ್ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳು ವಿಶಿಷ್ಟ ಗುರುತಿನ ಚೀಟಿ ಕಡ್ಡಾಯವಾಗಿ ಹೊಂದಿರಬೇಕು ಹಾಗೂ ಅಂಗವಿಕಲತೆಯ ಪ್ರಮಾಣ ಶೇ. 75 ಮತ್ತು ಅದಕ್ಕಿಂತ ಹೆಚ್ಚಿರಬೇಕು. ವಯಸ್ಸಿನ ಹಾಗೂ ಆದಾಯ ಮಿತಿ ಇರುವುದಿಲ್ಲ.

ಜಿಲ್ಲಾ ಸಮಿತಿಯಲ್ಲಿ ಆಯ್ಕೆಯಾದ ಫಲಾನುಭವಿಗಳ ಆರೈಕೆದಾರರ ಬ್ಯಾಂಕ್/ಅಂಚೆ ಕಛೇರಿ ಉಳಿತಾಯ ಖಾತೆಗೆ ಪ್ರೋತ್ಸಾಹಧನವನ್ನು ಜಮೆ ಮಾಡಲಾಗುವುದು. ಅರ್ಹ ವಿಕಲಚೇತನ ವ್ಯಕ್ತಿಗಳ ಆರೈಕೆದಾರರು ಅಕ್ಟೋಬರ್ 30 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಜಿಲ್ಲೆ ದೂರವಾಣಿ ಸಂಖ್ಯೆ: 0820-2574810 ಹಾಗೂ ಎಂ.ಆರ್. ಡಬ್ಲೂಂಯ್‍ ಅಥವಾ ವಿ.ಆರ್.ಡಬ್ಲೂಂಯ್‍ / ಯು.ಆರ್. ಡಬ್ಲೂಂಯ್‍ ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply