ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ ಮತ್ತು ಸೂಕ್ಷö್ಮ, ಅತೀ ಸೂಕ್ಷö್ಮ ಸಮುದಾಯದವರಿಗೆ ವಿವಿಧ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತಿದ್ದು, ಸದರಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಗ್ರಾಮ ಒನ್ ಸೇವಾ ಕೇಂದ್ರದಲ್ಲಿ ವೆಬ್‌ಸೈಟ್ https://sevasindhu.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಒಂದು ವಾರದ ಒಳಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2574892 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.