ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ಮಂಡಲ ಬಿಜೆಪಿ ಪಕ್ಷದ ವತಿಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವಿಧಾನ ಪರಿಷತ್ ಉಪಚುನಾವಣೆಯ ಕಾರ್ಯಚಟುವಟಿಕೆಗಳ ಹಾಗೂ ಮುಂದಿನ ಯೋಜನೆಗಳ ಬಗ್ಗೆ ಕುಂದಾಪುರ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್, ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಎಂಎಲ್‍ಸಿ ಅಭರ್ಥಿ ಕಿಶೋರ್ ಕುಮಾರ್ ಪುತ್ತೂರು, ಮಂಡಲ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ, ಸುಧೀರ್ ಕೆ. ಎಸ್, ಮಂಡಲ ನಿಕಟ ಪೂರ್ವ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.